Breaking News

ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,200 ಸಂಸದರು ಇರಬಹುದಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿಯವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಹೊಸ ಕಟ್ಟಡವು ಸ್ವಾವಲಂಬಿ ಭಾರತ ಅಥವಾ ಆತ್ಮನಿರ್ಭರ ಭಾರತದ ಚೈತನ್ಯವನ್ನು ಸಂಕೇತಿಸುತ್ತದೆ ಎಂದು …

Read More »

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕರು

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕರು ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜಭವನದಲ್ಲಿ ಗುರುವಾರ ರಾಜ್ಯಪಾಲ ಥಾವರಚಂದ್ ಗೆಹಲೊಟ್ ಅವರನ್ನು ಭೇಟಿ ಮಾಡಿ ನೂತನ ಸರಕಾರದ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಪಕ್ಷದ ಹಕ್ಕು ಪ್ರತಿಪಾದಿಸಿದರು. ನಾಯಕರಾದ ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಸಲೀಮ್ ಅಹ್ಮದ್ ಮತ್ತಿತರರು ಇದ್ದರು.

Read More »

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಗುರುವಾರ ಬೆಂಗಳೂರಿನ ಕ್ವಿನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರು ಸಿಎಲ್‌ಪಿ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಶಾಸಕರಾದ ಡಾ. ಪರಮೇಶ್ವರ್‌, ಆರ್‌.ವಿ ದೇಶಪಾಂಡೆ, ಎಚ್‌.ಕೆ ಪಾಟೀಲ, ಎಂ.ಬಿ ಪಾಟೀಲ …

Read More »

ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ

ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ. ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ …

Read More »

ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆಶಿ ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು ?

ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆಶಿ ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು ? ನವದೆಹಲಿ: ಸುದೀರ್ಘ ಸಮಾಲೋಚನೆಯ ಬಳಿಕವೂ ಬಗ್ಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆಯ ನಂತರ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಶಿವಕುಮಾರ ಅವರ ಉಪಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ …

Read More »

ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ನವದೆಹಲಿ: ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್‌ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಯೂ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್‌ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಿದರು. ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್‌ ಏಕೈಕ ಡಿಸಿಎಂ ಆಗಿರಲಿದ್ದಾರೆ. ಜತೆಗೆ 2024 ಲೋಕಸಭೆ ಚುನಾವಣೆ ವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ …

Read More »

ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ: ಕಿರಣ್ ರಿಜಿಜು ಬದಲಿಗೆ ಅರ್ಜುನ ರಾಮ ಮೇಘವಾಲ್ ಕಾನೂನು ಸಚಿವರಾಗಿ ನೇಮಕ

ನವದೆಹಲಿ : ಕೇಂದ್ರ ಸಚಿವ ಸಂಪುಟದ ಪುನರ್ರಚನೆಯಲ್ಲಿ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಗುರುವಾರ ಬದಲಾಯಿಸಲಾಗಿದೆ. ರಿಜಿಜು ಅವರ ಬದಲಿಗೆ ಕಾನೂನು ಸಚಿವ ಸ್ಥಾನವನ್ನು ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ. ಮೇಘವಾಲ್‌ ಅವರು ತಮ್ಮ ಅಸ್ತಿತ್ವದಲ್ಲಿರುವ ತಮ್ಮ ಖಾತೆಗಳಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕಿರಣ್ ರಿಜಿಜು ಅವರು ಈಗ ಭೂ ವಿಜ್ಞಾನ ಸಚಿವ ಸ್ಥಾನ ನೀಡಲಾಗಿದೆ. ಈ …

Read More »

ಡಿಸಿಎಂ ಡಿಕೆಶಿ ಪರಿಚಯ !

ಡಿಸಿಎಂ ಡಿಕೆಶಿ ಪರಿಚಯ ! ಯುವ ಭಾರತ ಸುದ್ದಿ  ಬೆಂಗಳೂರು : ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83). ತದನಂತರ …

Read More »

ಕರ್ನಾಟಕದಲ್ಲಿ ನೂತನವಾಗಿ ಆಯ್ಕೆಯಾದ ಶೇ.55ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಮೊಕದ್ದಮೆ : 97% ಕೋಟ್ಯಾಧಿಪತಿಗಳು

ಕರ್ನಾಟಕದಲ್ಲಿ ನೂತನವಾಗಿ ಆಯ್ಕೆಯಾದ ಶೇ.55ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಮೊಕದ್ದಮೆ : 97% ಕೋಟ್ಯಾಧಿಪತಿಗಳು ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, ಕರ್ನಾಟಕದ ಹೊಸದಾಗಿ ಚುನಾಯಿತರಾದ ಶಾಸಕರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ವಿಶ್ಲೇಷಿಸಿದ 223ರಲ್ಲಿ 122 ಅಭ್ಯರ್ಥಿಗಳು ಅಂದರೆ 55%ರಷ್ಟು ಕ್ರಿಮಿನಲ್ ಮೊಕದ್ದಮೆ ಇರುವ ಅಭ್ಯರ್ಥಿಗಳು ಈಗ ಚುನಾಯಿತರಾಗಿದ್ದಾರೆ. ಸುಮಾರು …

Read More »

ಬೆಂಗಳೂರು ಟ್ರಾಫಿಕ್: ದ್ವಿಚಕ್ರ ವಾಹನದಲ್ಲೇ ಕುಳಿತು ಕೆಲಸ ಮಾಡಿದ ಯುವತಿ; ಫೋಟೋ ವೈರಲ್ !

ಬೆಂಗಳೂರು ಟ್ರಾಫಿಕ್: ದ್ವಿಚಕ್ರ ವಾಹನದಲ್ಲೇ ಕುಳಿತು ಕೆಲಸ ಮಾಡಿದ ಯುವತಿ; ಫೋಟೋ ವೈರಲ್ ! ಯುವ ಭಾರತ ಸುದ್ದಿ ಬೆಂಗಳೂರು: ವಿಶ್ವದ 2ನೇ ಟ್ರಾಫಿಕ್ ಜಾಮ್ ನಗರಿ ಎನ್ನುವ ಕುಖ್ಯಾತಿಗೆ ಪಾತ್ರವಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಯುವತಿಯೊಬ್ಬರು ಲ್ಯಾಪ್ ಟಾಪ್ ಓಪನ್ ಮಾಡಿ ಕೆಲಸ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಟ್ವಿಟರ್ ಬಳಕೆದಾರರೊಬ್ಬರು ಸೋಪಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗೆ …

Read More »