Breaking News

ಹೊಸ ಸಂಸತ್ ಭವನವನ್ನು ಪ್ರಧಾನಿ ಮೋದಿ ಈ ತಿಂಗಳೇ ಉದ್ಘಾಟಿಸುವ ಸಾಧ್ಯತೆ

ಹೊಸ ಸಂಸತ್ ಭವನವನ್ನು ಪ್ರಧಾನಿ ಮೋದಿ ಈ ತಿಂಗಳೇ ಉದ್ಘಾಟಿಸುವ ಸಾಧ್ಯತೆ ನವದೆಹಲಿ : ಭಾರತದ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಕೊನೆಯಲ್ಲಿ ಉದ್ಘಾಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸಂಸತ್ತಿನ ಹೊಸ ಕಟ್ಟಡವು ಅಂತಿಮ ಹಂತದಲ್ಲಿದೆ, ಪ್ರಧಾನಿಯವರು ಮೇ ಕೊನೆಯ ವಾರದಲ್ಲಿ ತಮ್ಮ ಸರ್ಕಾರದ ಒಂಬತ್ತು ವರ್ಷಗಳ ಪೂರ್ಣಗೊಳ್ಳುವ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು …

Read More »

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಕಾರ್ಯಕರ್ತರನ್ನು ಅಭಿನಂದಿಸಿದ ನೂತನ ಶಾಸಕ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ …

Read More »

ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ : ಪರಮೇಶ್ವರ

ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ : ಪರಮೇಶ್ವರ ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಮಾಡಿತ್ತು. ಆದರೆ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳ ಜಾರಿಗೆ ಕೆಲವೊಂದು ಷರತ್ತುಗಳು ಅನ್ವಯವಾಗಲಿದೆ ಎಂದು ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುವ …

Read More »

ಇಂದೇ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ

ಇಂದೇ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ ಯುವ ಭಾರತ ‌ಸುದ್ದಿ ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಈಗ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಆಪ್ತ ಶಾಸಕರು ದೆಹಲಿಗೆ ತಲುಪಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ ಅವರು ಮಂಗಳವಾರ (ಮೇ …

Read More »

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ವಿದ್ಯುತ್ ಬಿಲ್ ಪಾವತಿಸಲ್ಲ ಎಂದ ಗ್ರಾಮಸ್ಥರು

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ವಿದ್ಯುತ್ ಬಿಲ್ ಪಾವತಿಸಲ್ಲ ಎಂದ ಗ್ರಾಮಸ್ಥರು ಯುವ ಭಾರತ ಸುದ್ದಿ ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ಘಟನೆ ತಾಲ್ಲೂಕಿನ ಜಾಲಿಕಟ್ಟೆಯಲ್ಲಿ ನಡೆದಿದೆ. ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಪಾವತಿ ಸಂಗ್ರಹಕ್ಕೆ ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ …

Read More »

ಸಿಎಂ ಆಯ್ಕೆ ಪ್ರಕ್ರಿಯೆ ಜೋರು !

ಸಿಎಂ ಆಯ್ಕೆ ಪ್ರಕ್ರಿಯೆ ಜೋರು ! ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದ ಕಾರಣ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನ ಆಯ್ಕೆಗಾಗಿ ಭಾನುವಾರ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಹೀಗಾಗಿ, ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ನಿರ್ಧರಿಸಲಾಗಿದೆ. ವಸಂತ ನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ಸಭೆ ನಡೆಯಿತು. ಖರ್ಗೆ …

Read More »

ಸಿಎಂ ನೀವೇ ಆಗಬೇಕು; ಡಿಕೆಶಿ ಮುಂದೆ ಬೆಂಬಲಿಗ ಶಾಸಕರ ಪಟ್ಟು !

ಸಿಎಂ ನೀವೇ ಆಗಬೇಕು; ಡಿಕೆಶಿ ಮುಂದೆ ಬೆಂಬಲಿಗ ಶಾಸಕರ ಪಟ್ಟು ! ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದಿಂದ ನೂತನ ಸಿಎಂ ಆಯ್ಕೆಗೆ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಡಿಕೆಶಿ ಸಿಎಂ ಮಾಡುವಂತೆ ಬೆಂಬಲಿಗ ಶಾಸಕರು ಬಿಗಿ ಪಟ್ಟು ಹಿಡಿದಿದ್ದು, ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿದೆ. ಡಿಸಿಎಂ ಸೇರಿದಂತೆ ಯಾವುದೇ ಕ್ಯಾಬಿನೆಟ್ ಸ್ಥಾನಕ್ಕೂ ಒಪ್ಪಬಾರದು. ಮುಖ್ಯಮಂತ್ರಿ ಮಾಡದಿದ್ದರೆ ಸರಕಾರದ …

Read More »

12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ NCB

12,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ NCB ಭಾರತದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆ ಬೆಂಗಳೂರು: ಭಾರತ, ಶ್ರೀಲಂಕಾ ಮತ್ತು ಮಾಲ್ಡೀವ್ಸ್ ಗೆ ತಲುಪಿಸಲು ತರಲಾಗುತ್ತಿದ್ದ ಬರೋಬ್ಬರಿ 12,000 ಕೋಟಿ ರೂ. ಮೌಲ್ಯದ ಡ್ರಗ್ಸನ್ನು NCB ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರು NCB ಜೋನಲ್ ಡೈರೆಕ್ಟರ್ ಅರವಿಂದನ್, NCB ಡೆಪ್ಯುಟಿ ಡೈರೆಕ್ಟರ್ ಸಂಜಯ್ ಕುಮಾರ್ ಸಿಂಗ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬೃಹತ್ ಜಾಲವನ್ನು ಬೇಧಿಸಿದೆ. ನೇವಿ ಮತ್ತು …

Read More »

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ !

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ ! ಬೆಂಗಳೂರು: ನೂತನವಾಗಿ ಆಯ್ಕೆಯಾದ ಕಾಂಗ್ರೆಸ್‌ ಶಾಸಕರ (ಸಿಎಲ್‌ಪಿ) ಸಭೆ ಇಂದು ಸಂಜೆ 6 ಗಂಟೆಗೆ ವಸಂತನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ರ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೆ ಅವರು, ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ಸಿಎಲ್‌ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಮತ್ತು …

Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ?

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ ಗೊತ್ತೇ ? ಬೆಂಗಳೂರು : ಕಾಂಗ್ರೆಸ್‌ ಪಕ್ಷ ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ. ಈಗ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದೆ. ಇದರೊಂದಿಗೆ ಕಾಂಗ್ರೆಸ್‌ಗೆ ನಾಲ್ಕು ರಾಜ್ಯದಲ್ಲಿ ಸ್ವತಂತ್ರ ಅಧಿಕಾರ ಸಿಕ್ಕಂತಾಗಿದೆ. ತಮಿಳುನಾಡು, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿ ಅಧಿಕಾರವನ್ನು ಹಂಚಿಕೊಂಡಿದೆ. ರಾಜಸ್ಥಾನದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆಗಳು ನಡೆಯಲಿದೆ.

Read More »