Breaking News

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕೆಲ ದಿನಗಳ ಹಿಂದಷ್ಟೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದವರು, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಮೇ 22 ರಿಂದ ಆರಂಭಗೊಂಡು, ಜೂನ್ 2 ರಂದು ಮುಕ್ತಾಯಗೊಳ್ಳಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು …

Read More »

ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಭೀಕರ ಅಪಘಾತಕ್ಕೆ ಇಬ್ಬರು ಬಲಿ ಯುವ ಭಾರತ ಸುದ್ದಿ ಹುಕ್ಕೇರಿ : ಹುಕ್ಕೇರಿ-ಬೆಳಗಾವಿ ರಸ್ತೆಯಲ್ಲಿ ಬಸ್ ಓವರ್ ಟೇಕ್ ಮಾಡುವ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಇಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಯಪಾಲ್ ಸಕಲಕ್ಕನವರ- ಜಯಶ್ರೀ ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ-ಬಡಕುಂದ್ರಿ ನಡುವೆ ಈ ದುರ್ಘಟನೆ ಸಂಭವಿಸಿದೆ. ಹುಕ್ಕೇರಿಯಿಂದ ಬೆಳಗಾವಿ ಕಡೆಗೆ ಎಕ್ಸ್ ಯು ವಿ ಕಾರು ವೇಗವಾಗಿ ಸಾಗುತ್ತಿತ್ತು. ಬೆಳಗಾವಿಯಿಂದ ಅಥಣಿಯತ್ತ …

Read More »

ಮನೆಯಿಂದಲೇ ಮತದಾನ‌ ಮಾಡಿದ ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌

ಮನೆಯಿಂದಲೇ ಮತದಾನ‌ ಮಾಡಿದ ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭೆ – 2023 ರ ಸಾರ್ವತ್ರಿಕ ಚುನಾವಣೆ ಅಂಗವಾಗಿ ಭಾರತ ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೆ ಮತದಾನ ಮಾಡುವುದಕ್ಕೆ ಅವಕಾಶ ನೀಡಿರುತ್ತದೆ. ಈ ಅವಕಾಶವನ್ನು ಬಳಸಿಕೊಂಡು ಬೆಳಗಾವಿ ಜಿಲ್ಲೆಯ …

Read More »

ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ …

Read More »

ಹಾರೂಗೇರಿಯಲ್ಲಿ ಪ್ರಿಯಾಂಕಾ ವಾದ್ರಾ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆ ತಂದ ಕಾಂಗ್ರೆಸ್ಸಿಗರು

ಹಾರೂಗೇರಿಯಲ್ಲಿ ಪ್ರಿಯಾಂಕಾ ವಾದ್ರಾ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆ ತಂದ ಕಾಂಗ್ರೆಸ್ಸಿಗರು ಕುಡಚಿ : ಕುಡಚಿ ವಿಧಾನಸಭಾ ಮತಕ್ಷೇತ್ರದಲ್ಲಿ ಮತಕ್ಷೇತ್ರದ ಹಾರೂಗೇರಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿದ್ದ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತಂದು ಕಾಂಗ್ರೆಸ್ ಪರ ಘೋಷಣೆ ಮೊಳಗಿಸಿರುವ ಘಟನೆ ಇದೀಗ ಭಾರೀ ವೈರಲಾಗಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಪರ ಕ್ರಮ ಕೈಗೊಳ್ಳಬೇಕಾಗಿದ್ದ ಅಧಿಕಾರಿಗಳು ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಈಗ ಬೇಸಿಗೆ ರಜೆ. ಹೀಗಾಗಿ ಮಕ್ಕಳನ್ನೇ ಪ್ರಿಯಾಂಕಾ ವಾದ್ರಾ …

Read More »

ಭಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹನುಮನ ಜನ್ಮಸ್ಥಳದಲ್ಲೇ ಪ್ರಧಾನಿ ಮೋದಿ ಕೆಂಡ

ಭಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹನುಮನ ಜನ್ಮಸ್ಥಳದಲ್ಲೇ ಪ್ರಧಾನಿ ಮೋದಿ ಕೆಂಡ ಹೊಸಪೇಟೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು, ಮಂಗಳವಾರ ‘ಭಗವಾನ್‌ ರಾಮ’ನ ಬಗ್ಗೆ ಅವರಿಗೆ (ಕಾಂಗ್ರೆಸ್‌ಗೆ) ಸಮಸ್ಯೆ ಇತ್ತು ಮತ್ತು ಈಗ “ಜೈ ಬಜರಂಗಬಲಿ (ಜೈ ಹನುಮಂತ)” ಎಂದು ಘೋಷಣೆ ಕೂಗುವವರನ್ನೂ ಲಾಕ್‌ ಮಾಡುವುದಾಗಿ ಕಾಂಗ್ರೆಸ್‌ನವರು ಪ್ರತಿಜ್ಞೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. …

Read More »

ಕೊನೆಗೂ ಮದುವೆ ನಿರ್ಧಾರಕ್ಕೆ ಬಂದ ರಮ್ಯಾ..!

ಕೊನೆಗೂ ಮದುವೆ ನಿರ್ಧಾರಕ್ಕೆ ಬಂದ ರಮ್ಯಾ..! ಯುವ ಭಾರತ ಸುದ್ದಿ ಮಂಡ್ಯ : ನಾನು ಮದುವೆಯಾಗಬೇಕು ಅಂದ್ರೆ ನೀವೇ ವರನನ್ನು ಹುಡುಕಿ. ನನಗೆ ಗೌಡರ ಹುಡುಗ ಸಿಕ್ತಾನೆ ಎಂದರೆ ಮದುವೆಗೆ ಸಿದ್ದ. ಎಲ್ಲಿ ಹುಡುಗರೇ ಸಿಕ್ತಾ ಇಲ್ಲ. ನನಗೆ ಹುಡುಗರನ್ನು ನೋಡಿ ನೋಡಿ ಸಾಕಾಯಿತು. ಬೇಕಿದ್ರೆ ನೀವೇ ಸ್ವಯಂವರ ಮಾಡಬಹುದು. ಮದುವೆಯಾಗಲು ನಾನು ಸಿದ್ದ ಎಂದು ಮಂಡ್ಯ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಹೇಳಿದರು. ಪತ್ರಕರ್ತರು ನಿಮ್ಮ ಮದುವೆ …

Read More »

ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು !

ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು ! ಬೆಂಗಳೂರು : ಬಿಜೆಪಿ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಗಾವಿಗೆ ಮೆಟ್ರೊ ರೈಲು ವಿಷಯವನ್ನು ಪ್ರಸ್ತಾಪಿಸಿದೆ. ಜೊತೆಗೆ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರುಗಳಿಗೂ ಮೆಟ್ರೊ ರೈಲಿನ ಸಂಪರ್ಕದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಒತ್ತು ನೀಡಿರುವುದು ವಿಶೇಷ.

Read More »

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಬೆಂಗಳೂರು : ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಅದು ಪ್ರಸ್ತಾಪಿಸಿದೆ. ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ …

Read More »

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ !

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ! ಬೆಂಗಳೂರು : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಪ್ರಸ್ತಾಪಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ.   ನ್ಯಾಯಪೀಠದೆದುರು ಎಲ್ಲರೂ ಸಮಾನರೇ. ಕರ್ನಾಟಕ ಮಾಹಿತಿದಾರರ ಸಂರಕ್ಷಣಾ ಕಾಯ್ದೆ ಜಾರಿ, ಕುಟುಂಬದ ರಕ್ತಸಂಬಂಧಿಗಳೊಳಗೆ ಉಡುಗೊರೆ / ದಾನ / ವಿಲ್ ರೂಪದ ಭೂ ವರ್ಗಾವಣೆಗೆ …

Read More »