Breaking News

ಪ್ಯಾನ್-ಆಧಾರ ಲಿಂಕ್ ಗಡುವು ವಿಸ್ತರಣೆ !

Spread the love

ಪ್ಯಾನ್-ಆಧಾರ ಲಿಂಕ್ ಗಡುವು ವಿಸ್ತರಣೆ !

ಪ್ಯಾನ್- ಆಧಾರ್ ಲಿಂಕ್ ಗಡುವನ್ನು ಜೂನ್ 30 ರ ವರೆಗೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗದೆ. ತೆರಿಗೆ ವಂಚನೆ ತಡೆಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿದೆ.

ಯುವ ಭಾರತ ‌ಸುದ್ದಿ ಮುಂಬಯಿ :
ಪ್ಯಾನ್ ( Pan ) ಹಾಗೂ ಆಧಾರ್ ಕಾರ್ಡ್ ( Aadhaar ) ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವು ವಿಸ್ತರಣೆಯಾಗಿದೆ. ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮುಗಿಯುವ ಎರಡು ದಿನಗಳ ಮುಂಚೆಯೇ ಕೇಂದ್ರ ಸರ್ಕಾರ ಗಡುವನ್ನು ವಿಸ್ತರಣೆ ಮಾಡಿದೆ . ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ . ಪರ್ಮನೆಂಟ್ ಅಕೌಂಟ್ ನಂಬರ್ ಅಂದರೆ PAN ಕಾರ್ಡ್ ಅತ್ಯಂತ ಪ್ರಮುಖ ಬ್ಯುಸಿನೆಸ್ ID ಆಗಿದ್ದು , ಪ್ಯಾನ್ ನಂಬರ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ .

ಬ್ಯಾಂಕಿನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆ ಮಾಡುವವರೆಗೆ ಎಲ್ಲ ಕೆಲಸಗಳಿಗೂ ಪ್ಯಾನ್ ಕಾರ್ಡ್ ಬೇಕೇ ಬೇಕು . ಆ ಪರಿಸ್ಥಿತಿಯಲ್ಲಿ ಪ್ಯಾನ್ ಕಾರ್ಡ್ ಇಲ್ಲದಿದ್ದರೆ ನಿಮ್ಮ ಅನೇಕ ಹಣಕಾಸು ಕೆಲಸಗಳು ಸ್ಥಗಿತವಾಗಬಹುದು . ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ , ಮುಂದೆ ದೊಡ್ಡ ಸಮಸ್ಯೆ ಎದುರಿಸಬೇಕಾಗಬಹುದು .

ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು , ಈ ಹಿಂದೆ ಮಾರ್ಚ್ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು . ಆದರೆ ಇದೀಗ ಜೂನ್ 30 ರವರೆಗೂ ಗಡುವು ವಿಸರಿಸಲಾಗಿದೆ .

ಆಧಾರ್ , ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್ ಸೆಂಟರ್‌ಗಳಲ್ಲಿ ಜನ ಮುಗಿಬಿದ್ದಿದ್ದಾರೆ . ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್ ಮಾಡಿಸುತ್ತಿದ್ದಾರೆ , ಇದನ್ನೇ ಕೆಲ ಸೈಬರ್ ಸೆಂಟರ್‌ಗಳು ಬಂಡವಾಳ ಮಾಡಿಕೊಂಡಿವೆ . ಬೇರೆ ಬೇರೆ ವೆಬ್‌ಸೈಟ್‌ಗಳಲ್ಲಿ ಪಾನ್ ಹಾಗೂ ಆಧಾರ್ ಲಿಂಕ್ ಮಾಡುತ್ತಿದ್ದಾರೆ . 1 ಸಾವಿರ ಶುಲ್ಕದ ಜೊತೆಗೆ ಸೈಬರ್ ಸೆಂಟರ್ ಮಾಲೀಕರು ಜೊತೆಗೆ ಪ್ರೊಸೆಸಿಂಗ್ ಶುಲ್ಕ ಎಂದು 500 ರೂಪಾಯಿ ಹೆಚ್ಚುವರಿ ವಸೂಲಿ ಮಾಡಲಾಗುತ್ತಿದೆ . ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಇಲಾಖೆಯು ತೆರಿಗೆದಾರರಿಗೆ ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್‌ಗಳನ್ನು ನೀಡಿದೆ .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen + eighteen =