ಸಂಪನ್ಮೂಲ ವ್ಯಕ್ತಿಗಳ ಹುದ್ದೆ: ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನ
ಬೆಳಗಾವಿ :
ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಸಿ ಗೌರಧನದ ಆಧಾರದ ಮೇಲೆ ೧(ಒಂದು) ವರ್ಷದ ಅವಧಿಗೆ ೧ ಹುದ್ದೆ ನೇಮಕಾತಿ ಮಾಡಿಕೊಳ್ಳಲು ಪುರಸಭೆಯಲ್ಲಿ ನೊಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಜು.೨೭ ೨೦೨೩ ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅವಧಿ ಮೀರಿ ಬಂದಂತಹ ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಡೇ-ನಲ್ಮ ಶಾಖೆ ಪುರಸಭೆ ಹುಕ್ಕೇರಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಹುಕ್ಕೇರಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.