Breaking News

ಕಾಂಗ್ರೆಸ್‌ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ

Spread the love

ಕಾಂಗ್ರೆಸ್‌ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ

ಬೆಂಗಳೂರು :
ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ ನಡೆದಿದ್ದು, ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಕ್ತಿಭವನದಲ್ಲಿ ಗ್ಯಾರಂಟಿ ಅನುಷ್ಠಾನ ಸಂಬಂಧ ಹಣಕಾಸು ಮತ್ತಿತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಎರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಕನಿಷ್ಠ 50 ಸಾವಿರ ಕೋಟಿ ರೂ.ಗಳ ಅಗತ್ಯವಿದ್ದು, ಸಂಪನ್ಮೂಲ ಕ್ರೋಡೀಕರಣದ ಜೊತೆಗೆ ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.
ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಬುಧವಾರ ಸಿಎಂ ಸಿದ್ದರಾಮಯ್ಯ ಮತ್ತೂಮ್ಮೆ ಸಚಿವರ ಜೊತೆ ಸಮಾಲೋಚನೆ ನಡೆಸಲಿದ್ದು, ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ವರದಿಯಾಗಿದೆ.

ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಅದರಲ್ಲೂ ಸಭೆಯಲ್ಲಿ ಪ್ರಮುಖವಾಗಿ 200 ಯೂನಿಟ್ ಉಚಿತ ವಿದ್ಯುತ್ ಜಾರಿ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಚಿತ ವಿದ್ಯುತ್​ ಯೋಜನೆಯಿಂದ 2.14 ಕೋಟಿ ಕುಟುಂಬಗಳಿಗೆ ಅನುಕೂಲವಾಗಿದೆ. ವಾರ್ಷಿಕ ಬಳಕೆಗೆ ಅಂದಾಜು 13,575 ಮಿಲಿಯನ್ ಯೂನಿಟ್ ಬೇಕು. ಈ ಯೋಜನೆಗೆ ಇಂಧನ ಶುಲ್ಕ ಅಂದಾಜು 8,008 ಕೋಟಿ ರೂ. ತಗಲುತ್ತದೆ. ಯೋಜನೆಗೆ ಒಟ್ಟು 12,038 ಕೋಟಿ ರೂಪಾಯಿ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಸುಮಾರು 50ರಷ್ಟು ಜನರು 100 ಯೂನಿಟ್ ಗಿಂತ ಕಡಿಮೆ ಬಳಸುವವರಿದ್ದಾರೆ. ಕೃಷಿ ಇಲಾಖೆಯ ಪಂಪ್‌ಸೆಟ್‌ಗೆ ವರ್ಷಕ್ಕೆ 14 ಸಾವಿರ ಕೋಟಿ ಬೇಕು. ಉಚಿತ ಹಿನ್ನೆಲೆಯಲ್ಲಿ ವಿದ್ಯುತ್ ಬಳಕೆದಾರರು ಇನ್ನಷ್ಟು ಹೆಚ್ಚಿಗೆ ಮಾಡಲಿದ್ದಾರೆ. ಗ್ಯಾಸ್ ಬದಲಾಗಿ ವಿದ್ಯುತ್ ಚಾಲಿತ ಒಲೆಗಳು ಹೆಚ್ಚಾಗಿ ಬಳಸಲಿದ್ದಾರೆ. ಇದರಿಂದ ಸರ್ಕಾರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇರುತ್ತದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

one + ten =