ಖಾಸಗಿ ಬಸ್ ಪಲ್ಟಿ : ಬೆಳಗಾವಿಯ ಚಾಲಕ ಸಾವು

ಹಾವೇರಿ :
ಇಂದು ಬೆಳಗಿನ ಜಾವ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಮೀರಜ್ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ (50) ಮತ್ತು ಪ್ರಯಾಣಿಕರೊಬ್ಬರು ಈ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
YuvaBharataha Latest Kannada News