Breaking News

ಸರಕಾರದ ಆದೇಶದಂತೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸಿ-ಪಿಎಸ್‌ಐ ಖಿಲಾರೆ.!

Spread the love


ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿದ್ದು, ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು.
ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸರಕಾರದ ಎಲ್ಲ ಇಲಾಖೆಯ ಜೊತೆಗೆ ಕೈಜೋಡಿಸಿ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಮಠ ಮಂದಿರಗಳಲ್ಲಿ ಪ್ರತಿಷ್ಠಾಪಿಸಬೇಕೆಂದು ತಿಳಿಸಿದರು.
ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಹಾಗೂ ಪೂಜಾ ಸಮಯದಲ್ಲಿ ಗರೀಷ್ಠ ೫ಜನ ಮಾತ್ರ ಭಾಗವಹಿಸಲು ಅವಕಾಶವಿದ್ದು, ಧ್ವನಿವರ್ಧಕ ಡಾಲ್ಬಿ, ನೃತ್ಯ, ಪಟಾಕಿ ಸಿಡಿಸುವದನ್ನು ಸರಕಾರ ಕಟ್ಟು ನಿಟ್ಟಾಗಿ ನಿರ್ಭಂಧಿಸಿದೆ. ೫ಜನಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದಲ್ಲಿ ಕಮೀಟಿಯ ಎಲ್ಲ ಸದಸ್ಯರುಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮಜರುಗಿಸಲು ಸರಕಾರ ಆದೇಶಿಸಿದೆ. ಹೀಗಾಗಿ ಈ ಬಾರಿಯ ಗಣೇಶೋತ್ಸವ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸುವಂತೆ ಮನವಿ ಮಾಡಿದರು.
ನಗರಸಭೆಯ ಅಧಿಕಾರಿ ತಾಂಬೂಳೆ ಮಾತನಾಡಿ, ಗಣೇಶ ಪ್ರತಿಷ್ಠಾಪಿಸಿದ ದೇವಸ್ಥಾನದಲ್ಲಿ ದಿನನಿತ್ಯ ಸ್ಯಾನಿಟೈಸರ್ ಸಿಂಪಡನೆ ಮಾಡುವದು, ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಾö್ಯನಿಂಗ ಮೂಲಕ ಪರೀಕ್ಷೆ ಮಾಡುವದು ಮತ್ತು ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸುವದು ಖಡ್ಡಾಯ. ಗಣೇಶ ವಿಸರ್ಜನೆಗೆ ಎಲ್ಲ ಏರ್ಪಾಡು ಮಾಡಿಕೊಡಲಾಗುವದು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಸಂಭAಧಿಸಿದ ಎಲ್ಲ ಇಲಾಖೆಯ ಪರವಾಣಿಗೆ ಪಡೆದು ಗಣೇಶೋತ್ಸವ ಆಚರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗೋಕಾಕ ಸಬ್ ಜೈಲ್ (ಬಂಧಿಖಾನೆ) ನಿರೀಕ್ಷಕ ಅಂಬರೀಶ ಪೂಜಾರಿ, ಹೆಸ್ಕಾಂ ಅಧಿಕಾರಿ ವಿಠ್ಠಲ ಧರ್ಮಟ್ಟಿ ಸೇರಿದಂತೆ ಸಾರ್ವಜನಿಕ ಗಣೇಶ ಪ್ರತಿಷ್ಠಪನಾ ಮಂಡಳಿ ಸದಸ್ಯರುಗಳು ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three + 9 =