ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ
ಬೆಳಗಾವಿ :
ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ 160 ನೇ ಜಯಂತಿ ಉತ್ಸವವನ್ನು ಸೋಮವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಗದಿಯ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಲೇಖಕ ಡಾ. ಶ್ರೀಧರ ಹೆಗಡೆ ಭದ್ರನ್ ಮಾತನಾಡಿ, ರಾಜಾ ಲಖಮಗೌಡರ ಪರಿಚಯದ ಜೊತೆಗೆ ಅವರ ದಾನಗುಣವನ್ನು ವಿವರಿಸಿದರು. ನಮ್ಮ ಸಂಸ್ಕೃತಿಯಲ್ಲಿ ದಾನಕ್ಕೆ ಇರುವ ಮಹತ್ವವನ್ನು ಉದ್ಧಾಲಕ ಮತ್ತು ನಚಿಕೇತರ ಕಥೆ ಹಾಗೂ ಶರಣರ ವಚನಗಳ ಮೂಲಕ ವಿವರಿಸಿದರು.
ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಹಾಗೂ ಸಮಾರಂಭದ ಅಧ್ಯಕ್ಷ ಲಿಂಗೌಡ ವಿ. ದೇಸಾಯಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರಾಚಾರ್ಯೆ ಡಾ. ಜ್ಯೋತಿ ಎಸ್. ಕವಳೇಕರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಮಹಾದೇವಿ ಸಿ. ಹುಣಶೀಬೀಜ ಪರಿಚಯಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಎಚ್.ಎನ್. ಬನ್ನೂರ ವಂದಿಸಿದರು. ಕೀರ್ತನಾ ಮತ್ತು ಸಂಗಡಿಗರು ಪ್ರಾರ್ಥನೆ ಹಾಡಿದರು. ಪ್ರಗತಿ ಮತ್ತು ಆಯಿಷಾ ಕಾರ್ಯಕ್ರಮ ನಿರೂಪಣೆ ಮಾಡಿದರು.
ಕೆ.ಎಲ್.ಇ. ಸಂಸ್ಥೆಯ ಆಜೀವ ಸದಸ್ಯ ಎಸ್.ಜಿ. ನಂಜಪ್ಪನವರ, ಡಾ. ಸತೀಶ ಎಂ.ಪಿ. ಹಾಗೂ ಪದವಿ ಪೂರ್ವ ಪ್ರಾಚಾರ್ಯ ವಿ.ಸಿ. ಕಾಮಗೋಳ ಮತ್ತು ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ
ವಿಜಯಕುಮಾರ ಪಾಟೀಲ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.