Breaking News

ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ!

Spread the love

ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ!

ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗಿಳಿಯಲು ಯುವ ನಾಯಕ ಡಾ. ರಾಜು ಶಿವಾನಂದ ಕಿರಣಗಿ ಮುಂದಾಗಿದ್ದಾರೆ. ಕೇವಲ 30 ವರ್ಷ ವಯಸ್ಸಿನ ಅವರು ಉದ್ಯಮಿ ಹಾಗೂ ಸಮಾಜಸೇವಕರಾಗಿ ರಾಯಬಾಗ ವಿಧಾನಸಭಾ ಮತಕ್ಷೇತ್ರಾದ್ಯಂತ ಚಿರಪರಿಚಿತರಾಗಿದ್ದಾರೆ. ತಮ್ಮ ಸೇವಾ ಕಾರ್ಯಗಳಿಂದ ಅವರು ಅತ್ಯಂತ ಸಣ್ಣ ವಯಸ್ಸಿನಲ್ಲಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದ್ದು ಭವಿಷ್ಯದ ಜನನಾಯಕರಾಗಿ ಕೆಲಸ ಮಾಡುವ ಆದಮ್ಯ ಉತ್ಸಾಹ ಅವರಲ್ಲಿದೆ.

ಯುವ ಬ್ರಿಗೇಡ್ ಕಾರ್ಯಕರ್ತರಾಗಿ, ಕರ್ನಾಟಕ ಜನ ಸೈನ್ಯ ಯುವ ಘಟಕದ ರಾಜ್ಯಾಧ್ಯಕ್ಷರಾಗಿ, ಶ್ರೀ ಸಂಗಮ ಫೌಂಡೇಶನ್ ಜಿಲ್ಲಾಧ್ಯಕ್ಷರಾಗಿ, ಮೇಜರ್ ಡಾ. ಪ್ರದೀಪ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ, ಓಂ ಸಾಯಿ ಶಿಕ್ಷಣ ಮತ್ತು ಸಮಾಜ ಸೇವಾ ಪೌಂಡೇಶನ್ ಅಧ್ಯಕ್ಷರಾಗಿ,
ಮಿರಿ ಪಿಕಲ್ಸ್ ಕನ್ಸಲ್ಟೆನ್ಸಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ, ಪೂಜಾ ಕಂಪ್ಯೂಟರ್ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಇವುಗಳಲ್ಲದೆ ಇನ್ನೂ ಹತ್ತು ಹಲವು ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅವುಗಳ ಯಶಸ್ಸಿಗೆ ಶ್ರಮಿಸಿದ್ದಾರೆ.

ಬಿಜೆಪಿಯ ವಿಧಾನಸಭೆ, ವಿಧಾನ ಪರಿಷತ್, ಲೋಕ ಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಗಳ ಪರ ಗೆಲುವಿಗೆ ದುಡಿದಿದ್ದಾರೆ. ಗ್ರಾಮೀಣ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ನೀಡಿದ ಶ್ರೇಯಸ್ಸು ಅವರಿಗಿದೆ. ಪ್ರವಾಹ ಪೀಡಿತ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರ ನೆರವಿಗೆ ಧಾವಿಸಿ ಆಸರೆಯಾಗಿದ್ದಾರೆ. ಜಗತ್ತಿಗೆ ಕೊರೊನಾ ಮಹಾಮಾರಿ ಅಪ್ಪಳಿಸಿದ ಸಂದರ್ಭದಲ್ಲಿ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಜನರಿಗೆ ಬೇಕಾದ ಆಹಾರಧಾನ್ಯ ಆರ್ಥಿಕ ನೆರವು ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಮನೆ ಮಾತಾಗಿ ಗುರುತಿಸಿಕೊಂಡಿದ್ದರು. ಅವರ ಸಮಾಜ ಸೇವೆ ಗುರುತಿಸಿ ಹಲವಾರು ಪ್ರಶಸ್ತಿಗಳು, ಗೌರವ ಡಾಕ್ಟರೇಟ್ ಸಹ ಲಭಿಸಿದೆ.

2004 ರಲ್ಲಿ ಇನ್ನೂ ವಿದ್ಯಾರ್ಥಿಯಾಗಿರುವಾಗಲೇ ಡಾ.ರಾಜು ಕಿರಣಗಿ ಅವರು ಹೋರಾಟಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಆನಂತರದ ದಿನಗಳಲ್ಲಿ ವಿದ್ಯಾರ್ಥಿಗಳು, ರೈತರು, ದೀನದಲಿತರ ಸಲುವಾಗಿ ಸಾಕಷ್ಟು ಹೋರಾಟಗಳಲ್ಲಿ ಅವರು ಧುಮುಕಿ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು.
ರಾಯಬಾಗ ತಾಲೂಕಿನ ಅತ್ಯಂತ ಪ್ರತಿಷ್ಠಿತ ಕಿರಣಗಿ ಮನೆತನದವರಾದ ರಾಜು ಕಿರಣಗಿ ಅವರು ಮೊದಲಿನಿಂದಲೂ ಸಮಾಜ ಸೇವೆಯಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ರಾಜಕೀಯ ಪ್ರವೇಶದ ನಂತರ ಬಹುದೊಡ್ಡ ಕನಸು ಕಂಡಿರುವ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಮೂಲಕ ಆರಿಸಿ ಬಂದು
ರಾಯಬಾಗ ವಿಧಾನ ಸಭಾ ಮತ ಕ್ಷೇತ್ರದಲ್ಲಿ ಬದಲಾವಣೆಯ ಹೊಸ ಪರ್ವಕ್ಕೆ ನಾಂದಿ ಹಾಡಬೇಕು ಎಂಬ ತವಕದಲ್ಲಿದ್ದಾರೆ. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೊಂದಿರುವ ತಾಲೂಕಿನ ಕಳಂಕವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ರಾಜು ಕಿರಣಗಿ ಅವರು ಯುವಕರ ಪಡೆಯೊಂದಿಗೆ ತಾಲೂಕಿಗೆ ಅಗತ್ಯವಾದ ಮೂಲಭೂತ ಸೌಲಭ್ಯವನ್ನು ಕಲ್ಪಿಸಿ ಅಭಿವೃದ್ಧಿ ಹೊಳೆಯನ್ನೇ ಹರಿಸಲು ಸಂಕಲ್ಪಿಸಿದ್ದಾರೆ. ಭವಿಷ್ಯದಲ್ಲಿ ರಾಯಬಾಗ ಮತಕ್ಷೇತ್ರಕ್ಕೆ ಅತ್ಯಗತ್ಯವಾಗಿರುವ ಅನುದಾನವನ್ನು ತಂದು ನೀರಾವರಿ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬ ಪಣತೊಟ್ಟಿದ್ದಾರೆ.

ರಾಜು ಕಿರಣಗಿ ಅವರು ಬಿಜೆಪಿ ನಾಯಕರ ಜೊತೆ ಅತ್ಯುತ್ತಮ ಸ್ನೇಹ ಸಂಬಂಧ ಹೊಂದಿದ್ದಾರೆ. ಹೀಗಾಗಿ ರಾಯಬಾಗ ಮತಕ್ಷೇತ್ರದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇವರ ಹೆಸರು ಪ್ರಧಾನವಾಗಿ ಚರ್ಚೆಗೆ ಬಂದಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಸಹ ಇವರ ಹೆಸರು ಮುಖ್ಯವಾಗಿ ಚರ್ಚಿತಗೊಂಡಿದೆ. ಒಂದು ವೇಳೆ ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ರಾಜು ಕಿರಣಗಿ ಅವರ ಮೂಲಕ ಬದಲಾವಣೆಗೆ ಮುಂದಾದರೆ ಯುವಕರು ಬಹುದೊಡ್ಡ ಅಂತರದಿಂದ ಬಿಜೆಪಿಯನ್ನು ಗೆಲ್ಲಿಸುವುದರಲ್ಲಿ ಯಾವ ಸಂದೇಹವು ಇಲ್ಲ. ಈ ಮೂಲಕ ಹೊಸ ಇತಿಹಾಸ ಸೃಷ್ಟಿಸುವುದರಲ್ಲಿ ಅನುಮಾನ ಇರದು‌.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

15 − thirteen =