ಜಂಟಿ ಸುದ್ದಿಗೋಷ್ಠಿ ವಿಚಾರ ನನಗೆ ಗೊತ್ತಿಲ್ಲ. ಬಾಲಚಂದ್ರ ಜೊತೆಗೆ ಮಾತನಾಡುವೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶನಿವಾರದಂದು ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ ಎಂದರು.
ಕೆ.ಆರ್.ಎಸ್ ಡ್ಯಾಮ್ ಬಿರುಕಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸಮಲತಾ ಅಂಬರೀಶ್ ನಡುವೆ ನಡೆದ ವಾಕ್ಸಮರ ವಿಚಾರಕ್ಕೆ ಸಂಬAಧಿಸಿದAತೆ ಮಾತನಾಡಿದ ಅವರು, ಯಾರು ಏನ್ ಮಾತನಾಡಿದ್ದಾರೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಎಮ್.ಡಿ ಅವರು ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಎಮ್.ಡಿ ಹೇಳುವುದು ಫೈನಲ್. ಸುಮಲತಾ ಅವರು ಯಾಕೆ ಹೀಗೆ ಹೇಳಿದರು ಅಂತ ನನಗೆ ಗೊತ್ತಿಲ್ಲ ಎಂದರು.
ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ವಿಚಾರಕ್ಕೆ ಉತ್ತರಿಸಿದ ಅವರು, ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಉರಲ್ಲಿ ಇರಲಿಲ್ಲ. ಸುದ್ದಿಗೋಷ್ಠಿ ಮಾಡುವ ಸಂದರ್ಭ ಬಂದಿಲ್ಲ. ಬಾಲಚಂದ್ರ ಜಾರಕಿಹೊಳಿ ಜತೆಗೆ ಈ ಬಗ್ಗೆ ಮಾತನಾಡುತ್ತೇನೆ. ನಾನು ಒಂಟಿ ಆಗುವ ಪ್ರಶ್ನೆಯೇ ಇಲ್ಲ. ನಾನೇ ಮಿತ್ರ ಮಂಡಳಿ ಸದಸ್ಯರನ್ನು ಭೇಟಿಯಾಗಿಲ್ಲ ಎಂದು ಉತ್ತರಿಸಿದರು.
YuvaBharataha Latest Kannada News