Breaking News

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ

Spread the love

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಕ್ಷ ಖಾತೆ ತೆರೆಯಲೇಬೇಕು. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಶಕ್ತಿಮೀರಿ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು.

ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಬಿಜೆಪಿ ಅತ್ಯಂತ ಪ್ರತಿಷ್ಠಿತ ಕ್ಷೇತ್ರವಾಗಿ ಪರಿಗಣಿಸಿದೆ. ಈ ಮತ ಕ್ಷೇತ್ರವನ್ನು ಗೆಲ್ಲಲು ನಾಯಕರಾದ ಸಂಜಯ ಪಾಟೀಲ, ಕಿರಣ ಜಾಧವ, ಧನಂಜಯ ಜಾಧವ ಸೇರಿದಂತೆ ಎಲ್ಲಾ ನಾಯಕರು ಹಗಲು ರಾತ್ರಿ
ದುಡಿಯಬೇಕು. ಸಂಜಯ ಪಾಟೀಲ ಹಾಗೂ ಧನಂಜಯ ಜಾಧವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಮೂರನೆಯವರಿಗೆ ಟಿಕೆಟ್ ಸಿಕ್ಕರೂ ಇಂದಿನ ಸಭೆಯಲ್ಲಿ ಮನಃಪೂರ್ವಕವಾಗಿ ಭಾಗವಹಿಸಿದ್ದಾರೆ ಅವರಿಗೆ ಅಭಿನಂದನೆ. ಇಂತಹ ಸನ್ನಿವೇಶಗಳನ್ನು ಕೇವಲ ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯವಿದೆ. ಸಂಜಯ ಪಾಟೀಲ ಎರಡು ಸಲ ಶಾಸಕರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಜೊತೆಗೆ ಧನಂಜಯ ಜಾಧವ ಅವರು ಬೆಳಗಾವಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನನಗೆ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ಧನಂಜಯ ಜಾಧವ ಹಾಗೂ ಸಂಜಯ ಪಾಟೀಲ ಎಲ್ಲಾ ಜವಾಬ್ದಾರಿಯನ್ನು ವಹಿಸಿಕೊಂಡು ನಾಗೇಶ ಮನ್ನೋಳ್ಕರ ಅವರನ್ನು ಗೆಲ್ಲಿಸಬೇಕಾಗಿದೆ ಎಂದರು. ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ನಮ್ಮದು ಅತ್ಯಂತ ಶಿಸ್ತಿನ ಹಾಗೂ ವಿಶ್ವದಲ್ಲೇ ಅತ್ಯಂತ ದೊಡ್ಡ ಪಕ್ಷವಾಗಿದೆ. ಯಾವುದೇ ಭಿನ್ನಮತ, ಬಂಡಾಯಗಳಿಗೆ ಇಲ್ಲಿ ಆಸ್ಪದವಿಲ್ಲ. ಪಕ್ಷದ ತೀರ್ಮಾನವೇ ಅಂತಿಮವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಾಯಕರು ನಿಸ್ವಾರ್ಥವಾಗಿ ಬಿಜೆಪಿ ಅಭ್ಯರ್ಥಿಯಾಗಿರುವ ನಾಗೇಶ ಮನ್ನೋಳ್ಕರ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಲು ಅವರು ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಗ್ಗೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ, ಶೆಟ್ಟರ್ ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರು. ಈಗ ಪಕ್ಷದ ಟಿಕೆಟ್ ಸಿಕ್ಕಿಲ್ಲ ಎಂದು ಬಿಜೆಪಿ ತೊರೆದಿದ್ದಾರೆ. ಪಕ್ಷಕ್ಕಿಂತ ಅವರೇನು ದೊಡ್ಡ ನಾಯಕರಲ್ಲ. ಪಕ್ಷದಲ್ಲಿ ಲಾಲ್ ಕೃಷ್ಣ ಅಡ್ವಾಣಿಯಂಥ ನಾಯಕರೇ ಬಹುದೊಡ್ಡ ತ್ಯಾಗ ಮಾಡಿದ್ದಾರೆ. ಆದರೆ ಎಲ್ಲಾ ಅಧಿಕಾರ ಅನುಭವಿಸಿ ಕೆಲವರು ಪಕ್ಷ ತೊರೆದಿದ್ದಾರೆ, ಮಾತನಾಡುತ್ತಿದ್ದಾರೆ. ಹೋಗುವವರು ಹೋಗಲಿ ಪಕ್ಷ ಸ್ವಚ್ಚವಾಗುತ್ತದೆ ಎಂದು ಲೇವಡಿ ಮಾಡಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

8 + 13 =