ಬಿಜೆಪಿಗೆ ರಾಜೀನಾಮೆ : ಕೊನೆಗೂ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ !

ಯುವ ಭಾರತ ಸುದ್ದಿ ಬೆಂಗಳೂರು :
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಗೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನನ್ನ ಲೆಟರ್ ಹೆಡ್ ನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರಿಗೆ ನಾನು ಯಾವುದೇ ಪತ್ರ ಬರೆದಿಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
YuvaBharataha Latest Kannada News