ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಬ್ ಪಂತ್

ಯುವ ಭಾರತ ಸುದ್ದಿ ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.
ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿದೆ. ಪಂತ್ ಅವರ ತಲೆಗೆ ಬ್ಯಾಂಡೇಜ್ ಹಾಕಲಾದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.
YuvaBharataha Latest Kannada News