ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!
Yuva Bharatha
September 17, 2021
Uncategorized
336 Views
ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!
ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಯುವ ಭಾರತ ಸುದ್ದಿ ಗೋಕಾಕ: ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರದಂದು ನಗರದ ಶಾಸಕರ ಗೃಹ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಧಾನಿಯಾಗಿ ಕಳೆದ ೭ ವರ್ಷಗಳಿಂದ ವಿಶ್ರಮಿಸದೆ ವಿವಿಧ ಯೋಜನೆಗಳಿಂದ ದೇಶವನ್ನು ಮುನ್ನಡೆಸುತ್ತಿದ್ದಾರೆ. ನರೇಂದ್ರ ಮೋದಿ ದೇಶ ಕಂಡ ಅಪ್ರತಿಮ ನಾಯಕ, ವಿಶ್ವದ ಹಲವರು ಪ್ರಮುಖ ನಾಯಕರ ಪೈಕಿ ಒಬ್ಬರಾಗಿ ಗಮನ ಸೆಳೆದಿದ್ದಾರೆ. ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಭಾರತ ಧಿಕ್ಕೆ ಬದಲಾಗಿದೆ, ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ. ದೇಶದ ರಕ್ಷಣೆ, ಆರ್ಥಿಕ ವ್ಯವಸ್ಥೆ, ಸಾಮಾಜಿಕ ಹಾಗು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಚಾಪು ಮೂಡಿಸಿರುವ ಅವರು ದೇಶವನ್ನು ಮುನ್ನಡೆಸುವ ದಿಟ್ಟನಾಯಕರೆನಿಸಿಕೊಂಡಿದ್ದಾರೆ. ಇಡೀ ಜಗತ್ತೆ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ದೇಶದ ದಿಟ್ಟನಾಯಕರು ಎಂದು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಅವರು ಬಡ ರೋಗಿಗಳಿಗೆ ಹಣ್ಣು-ಹಂಪಲ ವಿತರಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮುಖಂಡರಾದ ಸುರೇಶ ಪಾಟೀಲ, ಶಾಮಾನಂದ ಪೂಜೇರಿ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ಪೌರಾಯುಕ್ತ ಶಿವಾನಂದ ಹಿರೇಮಠ, ತಾಲೂಕಾ ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಡಾ.ರವೀಂದ್ರ ಅಂಟಿನ, ಶಶಿಧರ ದೇಮಶೇಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.