ರಮೇಶ ಜಾರಕಿಹೊಳಿ ಮೇಲಿನ ಆರೋಪದಲ್ಲಿ ಹುರುಳಿಲ್ಲ ಎಂದ SIT..!!
ತನಿಖಾ ವರದಿ ಸಲ್ಲಿಸಿದ ಹೈಕೋರ್ಟ್?
ಯುವ ಭಾರತ ಸುದ್ದಿ ಬೆಳಗಾವಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ನ್ಯಾಯಾಲಯಕ್ಕೆ SIT ಸಲ್ಲಿಸಿರುವ ವರದಿಯಲ್ಲಿ ಸ್ಪಷ್ಟವಾಗಿದೆ ಎಂದು ತಿಳಿದು ಬಂದಿದೆ.
ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಸಮ್ಮುಖದಲ್ಲಿ ತನಿಖಾಧಿಕಾರಿ ಕವಿತಾ ಅವರು ತನಿಖಾ ವರದಿ ಸಲ್ಲಿಸಿದ್ದು, ಯುವತಿ ಮೇಲೆ ಅತ್ಯಾಚಾರ ನಡೆಸಿರುವುದು ಎಲ್ಲಿಯೂ ಕಂಡು ಬಂದಿಲ್ಲ. ತನಿಖೆ ವೇಳೆ ಯಾವ ಸಾಕ್ಷಾಧಾರಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
ಎಸ್ ಐಟಿ ತನಿಖಾ ವರದಿ ಸಲ್ಲಿಸಲು ಗುರುವಾರ ಫೆ. 3ರಂದು ಹೈಕೊರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬಿ ರಿಪೋರ್ಟ್ ಇರುವ ತನಿಖಾ ವರದಿ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರ ಕೊರತೆ ಇದೆ ಎಂದು ಹೇಳಲಾಗುತ್ತಿದೆ.
YuvaBharataha Latest Kannada News