Breaking News

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ

Spread the love

ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಸಾಹುಕಾರ್ ಬಹುತೇಕ ಯಶಸ್ವಿ

ಯುವ ಭಾರತ ಸುದ್ದಿ ಅಥಣಿ :
ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬಹುತೇಕ ಯಶಸ್ವಿಯಾದಂತಿದೆ.
ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಹಿನ್ನೆಲೆಯಲ್ಲಿ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
2018ರ ಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಅವರು ಲಕ್ಷ್ಮಣ ಸವದಿ ಅವರನ್ನು ಸೋಲಿಸಿ ಅಥಣಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ಅಥಣಿ ಮತಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪರ್ಧಿಸುವುದಾಗಿ ಹೇಳಿದ್ದರಿಂದ ಈ ಬಗ್ಗೆ ಗೊಂದಲ ಉಂಟಾಗಿತ್ತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen − 13 =