Breaking News

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ !

Spread the love

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ !

ಗೋಕಾಕ ಚುನಾವಣೆ ಐತಿಹಾಸಿಕವಾಗಿರಲಿದೆ. ನನ್ನ ಗೆಲುವಿಗೆ ಈ ಸಲ ನೀವೇ ಶ್ರಮಿಸಬೇಕು. ಆ ವಿಶ್ವಾಸ ನನಗಿದೆ. ಬಿಜೆಪಿ ವರಿಷ್ಠರು ನನಗೆ ಈ ಬಾರಿ ಹಲವು ಕ್ಷೇತ್ರಗಳನ್ನು ಗೆಲ್ಲಿಸುವ ಜವಾಬ್ದಾರಿ ವಹಿಸಿರುವದರಿಂದ ನಾನು ಬೇರೆ ಬೇರೆ ಜಿಲ್ಲೆಗಳಲ್ಲಿ ಸುತ್ತಾಡಬೇಕಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವಾರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಕಂಕಣ ತೊಟ್ಟಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಬೇಕಿದೆ.

ಯುವ ಭಾರತ ಸುದ್ದಿ ಗೋಕಾಕ :
ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೆ ತಮ್ಮ ಮತಕ್ಷೇತ್ರದಲ್ಲಿ ಅಬ್ಬರಿಸಿದ್ದಾರೆ. ಶನಿವಾರ ಸಂಜೆ ಮಮದಾಪುರ ಮತ್ತು ಮಕ್ಕಳಗೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಅವರು ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ್ದಾರೆ.

*ರಮೇಶ ಜಾರಕಿಹೊಳಿ ಹೇಳಿದ್ದೇನು ?:*
ಮಮದಾಪುರ ಹಾಗೂ ಮಕ್ಕಳಗೇರಿ ಜಿಲ್ಲಾ ಪಂಚಾಯಿತಿ ಮತದಾರರಿಗೆ ನಾನು ಸದಾ ಚಿರರುಣಿಯಾಗಿರುತ್ತೇನೆ.

ವಿಧಾನಸಭಾ ಚುನಾವಣೆ ಘೋಷಣೆ ಪೂರ್ವದಲ್ಲಿ ಬಿಜೆಪಿ ಸಮಾವೇಶ ಮಾಡಿ ಮುಗಿಸೋಣ.
ಇಂದಿನ ಕಾರ್ಯಕ್ರಮ ನೋಡಿ ನನಗೆ ಮತ್ತಷ್ಟು ಉತ್ಸಾಹ ಬಂದಿದೆ. ಈ ಕಾರ್ಯಕ್ರಮ ಗಮನಿಸಿದರೆ
ವಿರೋಧಿಗಳಿಗೆ ಈಗಾಗಲೇ ಸ್ಪಷ್ಟ ಸೂಚನೆ ಕೊಟ್ಟಂತಾಗಿದೆ.
1999 ರ ವಿಧಾನಸಭಾ ಚುನಾವಣೆ ಫಲಿತಾಂಶದ ಲೀಡ್ ಮುರಿಯುತ್ತದೆ ಅನಿಸುತ್ತಿದೆ. ಲಕ್ಷ ಮತಗಳಿಂದ ಬೇಡ, ಈ ಸಲ 60 ಸಾವಿರ ಲೀಡ್ ನಿಂದ ಗೆದ್ದು ವಿಧಾನಸಭೆ ಪ್ರವೇಶಿಸುವುದರಲ್ಲಿ ಯಾವ ಸಂದೇಹವೂ ಇಲ್ಲ. ಅದು ಈ ಬಾರಿ ಇಮ್ಮಡಿಯಾಗುತ್ತದೆ ಎಂದು ರಮೇಶ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ವೃದ್ಧಿಯಾಗಿದೆ. ನೆರೆಯ ಪಾಕಿಸ್ತಾನದ ಮುಸ್ಲಿಂ ಬಂಧು ನಮ್ಮ ದೇಶದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎಂಬ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಪ್ರಗತಿಪಥದಲ್ಲಿ ಮುನ್ನುಗುತ್ತಿವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಒಂದೇ ಸಮುದಾಯದ ಒಲೈಕೆ ಹಿಂದೆ ಬಿದ್ದು ಹಾಳಾಗಿ ಹೋಗಿದೆ. ಆದರೆ, ಬಿಜೆಪಿ ಸರ್ವ ಸಮಾಜವನ್ನು ಒಗ್ಗೂಡಿಸಿಕೊಂಡು ಹೋಗುತ್ತಿದೆ. ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ.
ನಿಜವಾದ ಕೋಮುವಾದಿ ಪಕ್ಷ ಕಾಂಗ್ರೆಸ್ ಹೊರತು ಬಿಜೆಪಿ ಅಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿದೆ.
ಕಾಂಗ್ರೆಸ್ ಲೀಡರ್ ಶೀಪ್ ಒಂದೇ ಇತ್ತು. ಸೋನಿಯಾ ಗಾಂಧಿ ಬಳಿ ಹೋಗಬೇಕಿತ್ತು. ಅದು ಕುಟುಂಬ ಆಧಾರಿತ ಪಕ್ಷವಾಗಿಯೇ ಗುರುತಿಸಿಕೊಂಡಿದೆ ಎಂದು ಟೀಕಿಸಿದರು.

ವಿರೋಧ ಪಕ್ಷಗಳು ಕೇವಲ 40% ಸುಳ್ಳು ಆರೋಪ ಮಾಡುತ್ತಿದೆ.
ಆದರೆ, ಭ್ರಷ್ಟಾಚಾರ ಪಿತಾಮಹ ಕಾಂಗ್ರೆಸ್ ಪಕ್ಷ ಎನ್ನುವುದು ದೇಶದ ಜನತೆಗೆ ಗೊತ್ತಿದೆ.
ಕಾಂಗ್ರೆಸ್ ಪಕ್ಷ ನಂಬದ ಆಶ್ವಾಸನೆಗಳನ್ನು ನೀಡುತ್ತದೆ. ಅದನ್ನು ಜಾರಿಗೊಳಿಸಲು ಎಂದಿಗೂ ಸಾಧ್ಯವಿಲ್ಲ, ಸುಳ್ಳು ಹೇಳುತ್ತಿದೆ ಎಂದು ಟೀಕಾ ಪ್ರಹಾರಗೈದರು.
ಕಾಂಗ್ರೆಸ್ ಹಾಗೂ ರಾಜ್ಯಮಟ್ಟದ ಪಕ್ಷ ಜಾತಿವಾದಿಯಾಗಿವೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರಕಾರವನ್ನು ಮತ್ತೆ ಲೋಕಸಭೆಗೆ ಆಯ್ಕೆ ಮಾಡಬೇಕು. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ನಡೆದಿವೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿಯಲ್ಲಿ ಬಲಿಷ್ಠವಾದ ನಾಯಕತ್ವವಿದೆ. ಇಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯನ್ನು ಮತ್ತೆ ಗೆಲ್ಲಿಸಬೇಕಾಗಿದೆ.
ಈ ಸಲದ ಗೋಕಾಕ ವಿಧಾನಸಭಾ ಚುನಾವಣೆಯನ್ನು ನೀವೇ ಮಾಡಬೇಕು.
ಕಳೆದ ಬಾರಿಯೂ ನೀವೇ ಚುನಾವಣೆ ಮಾಡಿ ಗೆಲ್ಲಿಸಿದ್ದೀರಿ.
ರಾಜ್ಯದ ಹಲವಾರು ಮತಕ್ಷೇತ್ರಗಳಲ್ಲಿ ನಾನು ಅಲ್ಲಿನ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕಾಗಿದೆ.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಕೊಟ್ಟರೆ ಮತ್ತೆ ಬ್ಲ್ಯಾಕ್ ಮೇಲ್ ಶುರುವಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಬಿಜೆಪಿ ನುಡಿದಂತೆ ನಡೆಯುವ ಪಕ್ಷವಾಗಿದೆ. ಎಲ್ಲಾ ಜಾತಿ ಜನಾಂಗ ಬೆಂಬಲಿಸುವ ಬಿಜೆಪಿಯನ್ನು ಮತ್ತೆ ಜನ ಗೆಲ್ಲಿಸುವುದರಲ್ಲಿ ಯಾವ ಸಂದೇಹ ಇಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎದುರಾಳಿಗೆ ಭರ್ಜರಿ ಏಟು ಕೊಟ್ಟ ಸಾಹುಕಾರ್ :
ಗೋಕಾಕ ವಿಧಾನಸಭಾ ಚುನಾವಣೆಯಲ್ಲಿ ನನ್ನ ಎದುರಾಳಿ ನನ್ನ ವಿರುದ್ಧ ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಹಲವು ಚುನಾವಣೆಗಳಲ್ಲೂ ಸೋತರೂ ಆ ವ್ಯಕ್ತಿ ಪಾಠ ಕಲಿತಿಲ್ಲ. ಅದಕ್ಕೆ ನಾನು ಈಗ ಉತ್ತರ ಕೊಡಲಾರೆ. ಚುನಾವಣೆ ಮುಗಿದ ನಂತರ ಅದಕ್ಕೆ ಉತ್ತರ ಕೊಡುವೆ. ಮುಂದಿನ ದಿನಗಳಲ್ಲಿ ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಸಂಕಲ್ಪ ತೊಟ್ಟಿದ್ದೇನೆ ಎಂದು ಹೇಳಿದರು.

ಉಪಸ್ಥಿತರಿದ್ದ ಗಣ್ಯರು :

ಕಾರ್ಮಿಕ ಮುಖಂಡ ಅಂಬೀರಾವ್ ಪಾಟೀಲ್, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ,
ಗೋಕಾಕ ನಗರ ಬಿಜೆಪಿ ಅಧ್ಯಕ್ಷ ಭೀಮಶಿ ಭರಮಣ್ಣವರ, ಗೋಕಾಕ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೊಳ,
ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಗೋಕಾಕ ಕ್ಷೇತ್ರದ ಚುನಾವಣಾ ಪ್ರಭಾರಿ ಗುರುಪಾದ ಕಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಟಿಆರ್ ಕಾಗಲ್ ಸೇರಿದಂತೆ ಅನೇಕ ನಾಯಕರು, ಮಕ್ಕಳಗೇರಿ ಮತ್ತುು ಮಮದಾಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

12 + 3 =