Breaking News

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!

Spread the love

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!

ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ಯೋಜನೆಗಳ ಜಾರಿಗೊಳಿಸುತ್ತಿದ್ದು, ಅವುಗಳನ್ನು ಜನತೆಯಲ್ಲಿ ಅರಿವು ಮೂಢಿಸಿ ಅವರಿಗೆ ತಲುಪಿಸಲು ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಎಲ್ಲರು ಸಂಘಟಿತರಾಗಿ ಈ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜಿರಗ್ಯಾಳ ಮಾತನಾಡಿ, ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಒಳ್ಳೆಯ ನಾಗರಿರನ್ನಾಗಿ ಮಾಡಿ, ಮಕ್ಕಳಲ್ಲಿ ಲಿಂಗ ಬೇದ ಮಾಡದೆ ಸಮಾನತೆ ಮನೋಭಾವದಿಂದ ಬೆಳೆಸಿ ಕಿತ್ತೂರು ರಾಣಿಚೆನ್ನಮ್ಮ, ಝಾನ್ಸಿರಾಣಿ ಲಕ್ಷಿö್ಮÃಬಾಯಿಯರಂತೆ ಅವರನ್ನು ಧೈರ್ಯಶಾಲಿಗಳನ್ನಾಗಿ ಮಾಡಿ, ಪ್ರಧಾನಿ ಮೋದಿಯವರು ಮಹಿಳೆಯವರ ಅಭಿವೃದ್ಧಿಗಾಗ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಸದೃಢರಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಕೋವಿಡ್ ವಾರಿರ‍್ಸ್ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು.
ವೇದಿಕೆಯ ಮೇಲೆ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮಹಿಳಾ ಮೋರ್ಚಾ ಅಧ್ಯಕ್ಷರುಗಳಾದ ರಾಜೇಶ್ವರಿ ಒಡೆಯರ, ಭಾರತಿ ಅಂಗಡಿ, ಸಮಾಜ ಸೇವಕಾರ ರೇಖಾ ಕಂಬಾರ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ, ಶಿಲ್ಪಾ ಗೋಡಿಗೌಡರ ಇದ್ದರು.
ಈ ಸಂದರ್ಭದಲ್ಲಿ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳಾದ ಲಕ್ಷö್ಮಣ ಖಡಕಭಾಂವಿ, ಸುರೇಶ ಪತ್ತಾರ, ಮಂಜುನಾಥ ಪ್ರಭುನಟ್ಟಿ, ಮಲ್ಲಿಕಜಾನ ತಳವಾರ, ಕಿರಣ ಡಮಾವiಗರ, ಶ್ರೀದೇವಿ ತಡಕೋಡ, ಲಕ್ಷಿö್ಮÃ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

13 − three =