Breaking News

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

Spread the love

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಯುವ ಭಾರತ ಸುದ್ದಿ ಬೆಂಗಳೂರು:
ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಹಾಗೂ ಸಿ.ಪಿ.ಯೋಗೀಶ್ವರ ಮೊದಲಾದವರಿದ್ದರು. ಅವರ ಜೊತೆಗೆ ಅವರ ಬೆಂಬಲಿಗರು ಸಹ ಇದೇ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಶಶಿಭೂಷಣ ಹೆಗಡೆ ಈ ಹಿಂದೆ ಜೆಡಿಎಸ್‌ನಿಂದ ಶಿರಸಿ- ಸಿದ್ದಾಪುರ ಕ್ಷೇತ್ರದಲ್ಲಿ ಎರಡು ಸಲ ಸ್ಪರ್ಧಿಸಿದ್ದರು. ಇದಕ್ಕೂ ಮೊದಲು ಕುಮಟಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿದ್ದರು. ನಂತರ ಅವರು ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

eleven + five =