ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ
ಯುವ ಭಾರತ ಸುದ್ದಿ ಗೋಕಾಕ : ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರುವುದರೊಂದಿಗೆ ಶ್ರೇಷ್ಠ ವ್ಯಕ್ತಿಗಳಾಗಿರೆಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.
ಗುರುವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗೋಕಾಕ ಮತ್ತು ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಸಪ್ರಶ್ನೆ ಚೈತನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಳುವುದು ನೋಡುವುದು ಶ್ರೇಷ್ಠ ಗುಣುಗಳಾಗಿದ್ದು, ವಿದ್ಯಾರ್ಥಿಗಳು ಸಜ್ಜನರ ಸಂಗದಲ್ಲಿದ್ದು,ಸುಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನಿಮ್ಮಲಿರುವ ಅಗಾದವಾದ ಶಕ್ತಿಯ ಸದುಪಯೋಗದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಂ.ಡಿ.ಚುನಮರಿ, ಆಡಳಿತಾಧಿಕಾರಿ ಜಿ ಎಂ ಅಂದಾನಿ, ಪ್ರಾಚಾರ್ಯ ಕೆ.ಬಿ.ಮೆವುಂಡಿಮಠ ಇದ್ದರು.