Breaking News

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.!

Spread the love

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಮುರುಘರಾಜೇಂದ್ರ ಶ್ರೀ ಆಗ್ರಹ.!


ಗೋಕಾಕ: ರಮೇಶ ಜಾರಕಿಹೊಳಿ ಅವರಿಗೆ ಮರಳಿ ಸಚಿವ ಸ್ಥಾನ ನೀಡುವಂತೆ ನಗರದ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಬಹಳ ಅನ್ಯಾಯವಾಗಿದ್ದು, ಅವರು ಆರೋಪಮುಕ್ತರಾಗಲಿದ್ದಾರೆ. ಅವರಿಗಾದ ಅನ್ಯಾಯ ಸರಿಪಡಿಸಲು ಮುಖ್ಯಮಂತ್ರಿಗಳು ಮತ್ತೆ ಸಚಿವ ಸ್ಥಾನ ನೀಡಬೇಕು ಎಂದರು.
ರಮೇಶ ಅವರ ಅನೇಕ ಅಭಿವೃದ್ಧಿ ಕಾರ್ಯಗಳು ಹಾಗೂ ಅವರ ಅಭಿವೃದ್ಧಿಯ ವೇಗವನ್ನು ಕೆಲವರಿಗೆ ಸಹಿಸಲಾಗಿಲ್ಲ ಎಂದು ನನಗನಿಸುತ್ತದೆ ಎಂದು ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ರಮೇಶ ಜಾರಕಿಹೊಳಿ ಅವರ ಪಾತ್ರ ಮಹತ್ವದ್ದಾಗಿದೆ. ಇದನ್ನು ರಾಜ್ಯದ ಜನರು ಹಾಗೂ ಬಿಜೆಪಿ ಪಕ್ಷದ ಎಲ್ಲರೂ ಒಪ್ಪುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಆದಷ್ಟು ಬೇಗ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ರಮೇಶ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಯೋಗಿಕೊಳ್ಳ ರಸ್ತೆಯ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ತಂದಿದ್ದರು. ರಮೇಶ ಜಾರಕಿಹೊಳಿ ಸಚಿವರಾಗಿ ಮುಂದುವರೆದಿದ್ದಲ್ಲಿ ಡ್ಯಾಂ ಕಾಮಗಾರಿ ಪ್ರಾರಂಭವಾಗುತಿತ್ತು. ರಮೇಶ ಜಾರಕಿಹೊಳಿ ಅವರನ್ನು ಮರಳಿ ಸಚಿವರನ್ನಾಗಿ ಮಾಡಿ ನಮ್ಮ ಭಾಗದ ಅಭಿವೃದ್ಧಿಗೆ ಸಿಎಮ್ ಬಿ ಎಸ್ ಯಡಿಯೂರಪ್ಪನವರು ಸಹಕರಿಸಬೇಕು ಎಂದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

sixteen + eighteen =