ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಅಜ್ಜಯ್ಯನ ಹೆಸರಲ್ಲಿ ಶಿವಕುಮಾರ ಪ್ರಮಾಣ ವಚನ

ಬೆಂಗಳೂರು :
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಅವರ ಜೊತೆಗೆ 8 ಮಂದಿ ಸಚಿವರಾಗಿಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ 8 ಮಂದಿ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದರು.
ಸಿದ್ದರಾಮಯ್ಯ ಅವರು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಅಲ್ಲದೆ, ಡಾ.ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಸತೀಶ ಜಾರಕಿಹೊಳಿ,
ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
YuvaBharataha Latest Kannada News