ವಿಧಾನಸಭಾ ಚುನಾವಣೆ ಮೇ 10 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ
ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ, ಖಾಸಗಿ ಉದ್ಯೋಗಿಗಳಿಗೆ ರಜೆ ನೀಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬೇಕಿದೆ.