ಎಸ್ಎಸ್ಎಲ್‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ 15 ರ ವರೆಗೆ ಅವಕಾಶ
ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ.
ಮರುಮೌಲ್ಯ ಮಾಪನ ಮಾಡಲು ಮೇ 15 ರಿಂದ ಮೇ 21 ರ ವರೆಗೆ ಅವಕಾಶ ನೀಡಲಾಗಿದೆ. ಹಾಗೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ 08 ರಿಂದ ಮೇ 14ರ ವರೆಗೆ ಅವಕಾಶವಿದೆ.
ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 59,246 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ (ಶೇ.96.8) ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ ಸ್ಥಾನ (96.74) ಹಾಗೂ ಮೂರನೇ ಸ್ಥಾನ ಹಾಸನ ಜಿಲ್ಲೆ (96.68) ಮೂರನೇ ಸ್ಥಾನ ಪಡೆದಿದೆ.