Breaking News

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

Spread the love

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ಯುವ ಭಾರತ ಸುದ್ದಿ ತುಮಕೂರು :
ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿ ಷಡಕ್ಷರಿ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯ ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠಕ್ಕೆ ಕೆ.ಎಂ. ಹರ್ಷ ಎನ್ನುವವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹರ್ಷ ಅವರು ತುಮಕೂರು ತಾಲೂಕಿನ ಕಾಳೇನಹಳ್ಳಿ ನಿವಾಸಿ. ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಮಂಡ್ಯ ಜಿಲ್ಲೆಯ ಬಿಸುಗಲಿ ನಿವಾಸಿ ಗೌರೀಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

twelve − four =