ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ

ಯುವ ಭಾರತ ಸುದ್ದಿ ಮಂಡ್ಯ:
ಸಂಸದೆ ಸುಮಲತಾ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ.
ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕಿದ್ದು, ಸದ್ಯಕ್ಕೆ ಬೆಂಬಲ ಘೋಷಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಕುಟುಂಬ ರಾಜಕಾರಣ ಮಾಡುವುದಿಲ್ಲ, ನಾನು ರಾಜಕಾರಣದಲ್ಲಿ ಇರುವವರೆಗೂ ಮಗ ರಾಜಕಾರಣಕ್ಕೆ ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಳೆದ 4 ವರ್ಷಗಳಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಾಡಲು ಬಿಜೆಪಿ ಸಹಾಯ ಮಾಡಿದೆ. ಮಂಡ್ಯ ರಾಜಕಾರಣ ಶುದ್ಧೀಕರಣಗೊಳಿಸಲು ಬಿಜೆಪಿಗೆ ಬೆಂಬಲ ಘೋಷಿಸಿರುವುದಾಗಿ ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸ್ಪರ್ಧೆ ವಿಚಾರ ಚರ್ಚೆಯಾಗಿಲ್ಲ ಎಂದ ಅವರು, ಬಿಜೆಪಿ ವರಿಷ್ಠರ ಸೂಚನೆಯಂತೆ ನಿರ್ಣಯ
ಕೈಗೊಳ್ಳುವುದಾಗಿ ತಿಳಿಸಿದರು.
YuvaBharataha Latest Kannada News