ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.!
ಯುವ ಭಾರತ ಸುದ್ದಿ ಗೋಕಾಕ: ಜ್ವರ, ನೆಗಡಿ ಮತ್ತು ಕೆಮ್ಮು ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಕೊರೋನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಮಾಡಿದರು.
ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಗ್ರಾಮದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ ಪಡದೆ ಆರೋಗ್ಯ ಅಧಿಕಾರಿಗಳನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು ಎಂದರು.
ಕೊರೋನಾ ವೈರಾಣು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ನಮ್ಮ ಪ್ರೀತಿಪಾತ್ರರನ್ನು ಬಲಿ ಪಡೆಯುತ್ತಿದೆ. ಈ ಸಂದರ್ಭದಲ್ಲಿ ನಾವುಗಳು ಭಯ ಪಡದೆ ವೈರಾಣುವಿನ ಜೊತೆಗೆ ಹೋರಾಡಲು ಸಾಮಾಜಿಕ ಅಂತರ ಮಾಸ್ಕ ಧಾರಣೆ, ಕೈಗಳನ್ನು ಸೋಪಗಳಿಂದ ಅವಾಗವಾಗ ಸ್ವಚ್ಛವಾಗಿ ತೊಳೆದುಕೊಳ್ಳುವಂತೆ ತಿಳಿಸಿದರು.
ಜೊತೆಯಲ್ಲಿ ಚಿಕಿತ್ಸೆ ಪಡೆಯುವುದು ಕೂಡ ಅತ್ಯಂತ ಅವಶ್ಯವಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಸಹ ಸೇರಿಕೊಂಡು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜು ಬಿ ತಡಸನೂರ, ಉಪಾಧ್ಯಕ್ಷೆ ನಿರ್ಮಲಾ ಕುಂಬಾರ, ಪಿಡಿಒ ಎಂ ಡಿ ಸರ್ಕಾವಸ್, ಕಂದಾಯ ನಿರೀಕ್ಷಕ ಎಸ್.ಎನ್. ಹಿರೇಮಠ, ಗ್ರಾಮ ಲೇಕ್ಕಾಧಿಕಾರಿ ವಿ ಪಿ ಗಾಯದ, ಗ್ರಾಮ ಪಂಚಾಯತ್ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂಧಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.