ಬಿಜೆಪಿ ಚುನಾವಣಾ ಪ್ರಚಾರ ಸಮಿತಿಗೆ ಕೇಳಿ ಬಂತು ಅಚ್ಚರಿ ಹೆಸರು

ಯುವ ಭಾರತ ಸುದ್ದಿ ಬೆಂಗಳೂರು :
ಬಿಜೆಪಿ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಿದ್ದು, ಈ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರ ಹೆಸರು ಮುಂಚೂಣಿಯಲ್ಲಿ ಬಂದಿದೆ. ಇದೀಗ ಯಡಿಯೂರಪ್ಪ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಕಾಂಗ್ರೆಸ್ ಈಗಾಗಲೇ ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ ಅವರನ್ನು ತನ್ನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಆದ್ದರಿಂದ ಪ್ರಬಲ ಸಮುದಾಯವಾಗಿರುವ ಲಿಂಗಾಯತ ಸಮುದಾಯ ಯಡಿಯೂರಪ್ಪ ಅವರಿಗೆ ಈ ಸ್ಥಾನ ನೀಡಬೇಕು ಎಂದು ಬಿಜೆಪಿ ವರಿಷ್ಠರು ಲೆಕ್ಕಾಚಾರದಲ್ಲಿದ್ದಾರೆ.
YuvaBharataha Latest Kannada News