ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ

ಯುವ ಭಾರತ ಸುದ್ದಿ ಕಟೀಲು :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಧರ್ಮಪತ್ನಿ ಅವರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
YuvaBharataha Latest Kannada News