Breaking News

ಗೋಕಾಕನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಒಳಸಂಚು ಕೊನೆಗೂ ಬಯಲು

Spread the love

ಗೋಕಾಕನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಒಳಸಂಚು ಕೊನೆಗೂ ಬಯಲು

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಸೋಲಿಸಲು ಅವರ ರಾಜಕೀಯ ವಿರೋಧಿಗಳು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಇಂತಹ ಒಂದು ಒಳಸಂಚು ಇದೀಗ ಕೊನೆಗೂ ಬಯಲಾಗಿದೆ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಇದ್ದ ಜೆಡಿಎಸ್ ಅಭ್ಯರ್ಥಿ ಇದೀಗ ಕಣದಿಂದ ಹಿಂದೆ ಸರಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಅವರಿಗೆ
ನೆರವಾಗುವ ಪ್ರಯತ್ನವಾಗಿ ಇದೀಗ ಜೆಡಿಎಸ್ ಅಭ್ಯರ್ಥಿ ಚಂದನ ಗಿಡ್ಡನವರ ಕಣದಿಂದ ಹಿಂದೆ ಸರಿದಿದ್ದಾರೆ. ತಮ್ಮ ನಾಮಪತ್ರವನ್ನು ಅವರು ವಾಪಸ್ ಪಡೆದುಕೊಂಡಿದ್ದಾರೆ.

ಗೋಕಾಕ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪ್ರಯತ್ನ ಎಂದಿಗೂ ಕೈಗೂಡುವುದಿಲ್ಲ ಎಂಬಂತಿದ್ದರೂ ಈ ಇಬ್ಬರು ಅಭ್ಯರ್ಥಿಗಳು ಕೊನೆ ಯತ್ನದಲ್ಲಿ ಒಂದಾಗಿರುವುದು ಇದೀಗ ನಗೆ ಪಾಟಲಿಗೆ ಗುರಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಅವರಿಗೆ ಗೆಲುವು ತಂದುಕೊಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಅಭ್ಯರ್ಥಿ ಇದೀಗ ತಮ್ಮ ನಾಮಪತ್ರ ಹಿಂಪಡೆಯುವ ಮೂಲಕ ನೆರವಾಗಿರುವುದು ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರನ್ನು ಕೆರಳಿಸಿದೆ. ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುವ ಅಗತ್ಯವೇ ಇರಲಿಲ್ಲ. ಆದರೆ ಇದೀಗ ಚುನಾವಣೆ ಕಾಲಕ್ಕೆ ಶಸ್ತ್ರತ್ಯಾಗ ಮಾಡಿರುವುದು ಅಪಾರ ಜೆಡಿಎಸ್ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಅನೇಕ ಕಾರ್ಯಕರ್ತರು ಪ್ರತಿಕ್ರಿಯಿಸಿದ್ದಾರೆ. ಗೋಕಾಕ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ಮಾದರಿಯಾಗಿ ನಿಂತಿವೆ. ಎದುರಾಳಿ ಅಭ್ಯರ್ಥಿಗಳು ಎಷ್ಟೇ ಪ್ರಯತ್ನ ನಡೆಸಿ ಅವರನ್ನು ಕಟ್ಟಿಹಾಕಲು ಯತ್ನಿಸಿದರೂ ಅವರ ಕಾರ್ಯ ಎಂದಿಗೂ ಕೈಗೂಡದು. ಈ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ ಪಕ್ಷ ನೇರವಾಗಿ ಯುದ್ಧ ಜಯಿಸಲು ಸಾಧ್ಯವಾಗದೆ ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಸಲು ಯಶಸ್ವಿಯಾಗಿದೆ. ಆದರೆ ಎಷ್ಟೇ ಪ್ರಯತ್ನ ಮಾಡಿ ಎದುರಾಳಿಗಳು ಒಂದಾದರೂ ಸಹ ಗೋಕಾಕನಲ್ಲಿ ರಮೇಶ ಜಾರಕಿಹೊಳಿ ಅವರ ಗೆಲುವು ಶತಸಿದ್ಧ. ಸಹಸ್ರ ಸಹಸ್ರ ಮತಗಳ ಅಂತರದಿಂದ ಅವರು ಈ ಸಲದ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎನ್ನುವುದು ಗೋಕಾಕ ಮತದಾರರ ಮನದಾಳದ ಇಂಗಿತವಾಗಿದೆ.

ಒಟ್ಟಾರೆ ಸದ್ಯ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ ಜಾರಕಿಹೊಳಿ ಅವರ ಪರವಾಗಿ ಇನ್ನಷ್ಟು ಅನುಕಂಪದ ಅಲೆ ಸೃಷ್ಟಿಯಾಗಲು ಕಾರಣವಾಗಿದೆ. ರಮೇಶ ಜಾರಕಿಹೊಳಿ ಅವರ ಜಯದ ಅಂತರ ಇನ್ನಷ್ಟು ಹೆಚ್ಚಲಿದೆ ಎನ್ನುವುದು ಗೋಕಾಕ ಮತದಾರರ ಪ್ರತಿಕ್ರಿಯೆಯಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

sixteen − seven =