ನಿಜವಾಯ್ತು ಕೋಡಿಮಠದ ಶ್ರೀಗಳ ಭವಿಷ್ಯ..!

ಯುವ ಭಾರತ ಸುದ್ದಿ ಅಬೆಂಗಳೂರು :
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ಗೆ ಬಹುಮತ ಸಿಕ್ಕಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 113 ಸ್ಥಾನಗಳನ್ನು ಗೆದ್ದಿದೆ ಮತ್ತು 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಾಕೆಂದರೆ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ಕೆಲತಿಂಗಳ ಹಿಂದೆ ಭವಿಷ್ಯ ನುಡಿದಿದ್ದರು.
ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಈಗ ಕಾಂಗ್ರೆಸ್ ಬಹುಮತ ಪಡೆದಿದೆ. ಇದರೊಂದಿಗೆ ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಅತಂತ್ರ ವಿಧಾಸಭೆಯ ಸಂಬನೀಯತೆ ಬಗ್ಗೆ ಹಲವು ಮತದಾನೋತ್ತರ ಸಮೀಕ್ಷೆಗಳು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ.
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ನುಡಿದ ಬಹುತೇಕ ಭವಿಷ್ಯಗಳು ನಿಜವಾಗಿವೆ. ಇಡೀ ವಿಶ್ವದಲ್ಲಿ ರೋಗರುಜಿನ ಕಾಡಲಿದೆ ಎಂದು ಹೇಳಿದ್ದರು. ಅದರಂತೆ ಕೋರೋನಾ ಇಡೀ ವಿಶ್ವವನ್ನೇ ಕಟ್ಟಿ ಕಾಡಿತ್ತು. ಕಾಡುಪ್ರಾಣಿಗಳು ನಾಡಿಗೆ ನುಗ್ಗುತ್ತವೆ ಎಂದು ಕಳೆದ ವರ್ಷ ಹೇಳಿದ್ದರು.
ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗಿದ ಹಲವಾರು ಘಟನೆಗಳು ನಡೆದಿವೆ. ಕೆಲ ತಿಂಗಳ ಹಿಂದೆ ಕರ್ನಾಟಕ ಚುನಾವಣೆ ಬಗ್ಗೆಯೂ ನುಡಿದಿದ್ದ ಭವಿಷ್ಯವೂ ಈಗ ನಿಜವಾಗಿದೆ. ಕೋಡಿಮಠದ ಶ್ರೀಗಳು ಇದೇ ಫೆಬ್ರವರಿಯಲ್ಲಿ, ರಾಜ್ಯದಲ್ಲಿ ರಾಜಕೀಯ ಅರಾಜಕತೆಯ ವಾತಾವರಣವಿದೆ.
ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ರಾಜಕೀಯ ಪರಸ್ಪರ ಒಗ್ಗೂಡಿಕೊಂಡು ಚುನಾವಣೆಯನ್ನು (ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ) ಎದುರಿಸುವುದಿಲ್ಲ. ಆದರೆ, ಚುನಾವಣೆಯಲ್ಲಿ ಈ ಬಾರಿ ಒಂದು ಪಕ್ಷಕ್ಕೆ ಸ್ಪಷ್ಟವಾದ ಬಹುಮತ ಸಿಗಲಿದೆ. ಮತದಾರರು ಒಂದು ಪಕ್ಷಕ್ಕೆ ಸ್ಪಷ್ಟವಾದ ಅಧಿಕಾರ ಕೊಡುತ್ತಾರೆ. ಈ ಬಾರಿ ಸಮ್ಮಿಶ್ರ ಸರ್ಕಾರದ ಸ್ಥಿತಿ ಬರುವುದಿಲ್ಲ ಎಂದು ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕಿದೆ.
YuvaBharataha Latest Kannada News