Breaking News

ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

Spread the love

ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಯುವ ಭಾರತ ಸುದ್ದಿ ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಚುನಾವಣಾ ಆಯೋಗವು 221 ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ.
ಚಿಲುಮೆಯ ಗೊಂದಲದಲ್ಲಿರುವ ಚಿಕ್ಕಪೇಟೆ ಶಿವಾಜಿನಗರ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಅಂತಿಮ ಪಟ್ಟಿಯನ್ನು ಪ್ರಕಟಿಸಿಲ್ಲ. ಉಳಿದಂತೆ ಎಲ್ಲಾ ಕ್ಷೇತ್ರದ ಪಟ್ಟಿಯೂ ಸಾರ್ವಜನಿಕರಿಗೆ ಲಭ್ಯವಿದೆ.
ಮತದಾರರ ಪಟ್ಟಿಯಲ್ಲಿ ಗೊಂದಲವಿದ್ದರೆ www.ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು ಅಥವಾ www.nvsp.in ಅಥವಾ Voter Portal ಅಥವಾ Voter Helpline Mobile App ಮೂಲಕ ತಮ್ಮ ಮಾಹಿತಿ ತಪ್ಪಿದ್ದಲ್ಲಿ ಮತದಾರರು ಮತ್ತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಚುನಾವಣಾ ಆಯೋಗವು, ಕರ್ನಾಟಕ ವಿಧಾನಸಭಾ ಚುನಾವಣೆ – 2023ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ.

ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ. ಈ ಪೈಕಿ ಪುರುಷರು 2,54,49,725, ಮಹಿಳೆಯರು 2,50,94,326, ಇತರರು 4,502 ಮಂದಿ ಇದ್ದಾರೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು (6,50,532) ಇದ್ದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು (1,66,521) ಇದ್ದಾರೆ. ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆಯಾಗಿದ್ದು, 1000 ಪುರಷರಿಗೆ/988 ಮಹಿಳೆಯರಿದ್ದಾರೆ. ಕಳೆದ ಬಾರಿ 983 ಅನುಪಾತವಿತ್ತು. ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

9 + 2 =