ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ !

ದೆಹಲಿ :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿಶೇಷ ಗಮನಹರಿಸಿದೆ. ಪಕ್ಷದ ಪ್ರಚಾರಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಎಂಟು ಕೇಂದ್ರ ಸಚಿವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ ಪ್ರಚಾರಕರ ಪಟ್ಟಿಯಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರು ಹಾಗೂ ಮುಖಂಡರು ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಇತರ ನಾಯಕರಾದ ಮನ್ಸುಖ್ ಮಂಡಾವಿಯಾ, ಅಣ್ಣಾಮಲೈ, ಅರುಣ್ ಸಿಂಗ್, ಡಿ.ಕೆ. ಅರುಣಾ, ಸಿ.ಟಿ ರವಿ, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾನ್, ಹೇಮಂತ್ ಬಿಸ್ವಾ ಶರ್ಮಾ, ದೇವೇಂದ್ರ ಫಡ್ನವಿಸ್, ಪ್ರಭಾಕರ್ ಕೋರೆ, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ್ ಖೂಬಾ, ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನ ಗೌಡ ಪಾಟೀಲ್ ಯತ್ನಾಳ್, ಉಮೇಶ್ ಜಾಧವ್, ಚಲವಾದಿ ನಾರಾಯಣ ಸ್ವಾಮಿ, ಎನ್. ರವಿಕುಮಾರ್, ಜಿ.ವಿ. ರಾಜೇಶ್, ಜಗ್ಗೇಶ್, ಶ್ರುತಿ, ತಾರಾ ಅನುರಾಧ ಅವರನ್ನು ಸ್ಟಾರ್ ಪ್ರಚಾರಕರಾಗಿ ಅವಕಾಶ ನೀಡಲಾಗಿದೆ.
YuvaBharataha Latest Kannada News