ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ
ಯುವ ಭಾರತ ಸುದ್ದಿ ಹುಬ್ಬಳ್ಳಿ :
ನನಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗಲಿಲ್ಲ. ನನಗೆ ಟಿಕೆಟ್ ತಪ್ಪಲು ಮೂಲ ಕಾರಣ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಗೆ ರಾಜೀನಾಮೆ ನೀಡಲು ಹಾಗೂ ನನ್ನ ಟಿಕೆಟ್ ಕೈತಪ್ಪಲು ಸಂತೋಷ್ ಮುಖ್ಯ ಕಾರಣರಾಗಿದ್ದಾರೆ ಎಂದು ಆರೋಪ ಮಾಡಿದರು.
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ನಾನು ಕಾರಣ. ಇದರಿಂದಾಗಿ ಮಂಗಲಾ ಅಂಗಡಿಯವರು ಗೆದ್ದಿದ್ದಾರೆ. ಅವರ ಗೆಲುವಿನಲ್ಲಿ ನನ್ನ ಪಾತ್ರ ಬಹಳ ಮುಖ್ಯವಾಗಿತ್ತು ಎಂದು ಜಗದೀಶ್ ಶೆಟ್ಟರ್ ಹೇಳಿದರು.