Breaking News

ಕೊನೆಗೂ ಕೂಡಿಬಂತು ಮುಹೂರ್ತ : ಬಿಜೆಪಿ ಟಿಕೆಟ್ ಮಂಗಳವಾರ ಬಿಡುಗಡೆ !

Spread the love

ಕೊನೆಗೂ ಕೂಡಿಬಂತು ಮುಹೂರ್ತ : ಬಿಜೆಪಿ ಟಿಕೆಟ್ ಮಂಗಳವಾರ ಬಿಡುಗಡೆ !

ಯುವ ಭಾರತ ಸುದ್ದಿ ದೆಹಲಿ :
ಇಡೀ ಕರ್ನಾಟಕದ ಜನತೆ ಕಾದು ಕುಳಿತ ಕ್ಷಣಕ್ಕೆ ಕೊನೆಗೂ ಮುಹೂರ್ತ ಒದಗಿ ಬಂದಂತೆ ಇದೆ. ಆಡಳಿತರೂಢ ಬಿಜೆಪಿ ತನ್ನ ಚೊಚ್ಚಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ದಿನಾಂಕವನ್ನು ಇದೀಗ ಪ್ರಕಟಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಮಂಗಳವಾರ ಟಿಕೆಟ್ ಘೋಷಣೆಗೆ ಮುಹೂರ್ತ ಒದಗಿದೆ.

ಈ ಬಗ್ಗೆ ಸೋಮವಾರ ರಾತ್ರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳವಾರ ಯಾವುದೇ ಕಾರಣಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಹಳ ದೊಡ್ಡ ಮಟ್ಟದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಕೆಲವು ಕ್ಷೇತ್ರಗಳಿಗೆ ಅಚ್ಚರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಇಲ್ಲ. ಹೀಗಾಗಿ ತಡವಾಗಿದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಪಡೆದು ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಮಾಡಲಾಗುತ್ತದೆ. ಒಟ್ಟಾರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹಳ ಕುತೂಹಲದಿಂದ ಕೂಡಿರಲಿದೆ ಎಂದು ಅವರು ತಿಳಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

sixteen − eight =