Breaking News

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು !

Spread the love

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು !

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿಯಲ್ಲಿ ಕನ್ನಡ ಹೋರಾಟ ಮಾಡುತ್ತಿರುವ ಕನ್ನಡ ಮುಖಂಡರಿಗೆ ಇದೀಗ ಕರ್ನಾಟಕದ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇದರಿಂದ ಇಲ್ಲಿಯ ಕನ್ನಡ ಹೋರಾಟಗಾರರು ಸಭೆ ಸೇರಿ ಪೊಲೀಸ್ ಇಲಾಖೆ ವಿರುದ್ಧ ಸಿಡಿದೆದಿದ್ದಾರೆ.

ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಇದೀಗ ಕನ್ನಡ ಮುಖಂಡರ ವಿರುದ್ಧ ಗೂಂಡಾ ಕಾಯಿದೆಯಡಿ ಕೇಸ್ ದಾಖಲು ಮಾಡಿದ್ದಾರೆ. ಇದು ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸಭೆ ತುರ್ತು ಸಭೆ ನಡೆಸಿದ ಕನ್ನಡ ಹೋರಾಟಗಾರರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅನಿಲ್ ದಡ್ಡಿಮನಿ, ಸಂಪತ್ ಕುಮಾರ್ ದೇಸಾಯಿ ಅವರಿಗೆ ನೋಟಿಸ್ ನೀಡಿರುವುದಕ್ಕೆ ಕಿಡಿಕಾರಿದರು. ಈ ಬಗ್ಗೆ ಮಾತನಾಡಿದ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಅವರು ಬೆಳಗಾವಿಯಲ್ಲಿ ಕನ್ನಡಕ್ಕಾಗಿ ಕೆಲಸ ಮಾಡಿದ ಕನ್ನಡಿಗರ ವಿರುದ್ಧ ಸರಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ನಿಲುವು ಖಂಡನೀಯ. ಈ ಬಗ್ಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡುವುದಾಗಿ ತಿಳಿಸಿದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

14 + 4 =