Breaking News

ಸೂರ್ಯ ಬರೆದ ದಾಖಲೆ ಇದು

Spread the love

ಸೂರ್ಯ ಬರೆದ ದಾಖಲೆ ಇದು

ಯುವ ಭಾರತ ಸುದ್ದಿ ಮುಂಬೈ :
ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ಕ್ರಿಕೆಟ್ ರಂಗದಲ್ಲಿ ದಿನೇ ದಿನೇ ಹೊಸ ಹೊಸ ದಾಖಲೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ಅವರ ಬ್ಯಾಟಿಂಗ್ ವೈಭವಕ್ಕೆ ವಿಶ್ವ ಕ್ರಿಕೆಟ್ ಮನಸೋತಿದೆ.
ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್
ಇದೀಗ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ.

ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ . ಸೂರ್ಯ ಪ್ರಸ್ತುತ 908 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐಸಿಸಿ ನಂ .1 ಬ್ಯಾಟ್ಸ್‌ಮನ್ ಆಗಿದ್ದಾರೆ.

ಪಾಕಿಸ್ತಾನದ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ 836 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ . 631 ಅಂಕಗಳೊಂದಿಗೆ ವಿರಾಟ್ ಕೊಹ್ಲಿ 13 ನೇ ಸ್ಥಾನದಲ್ಲಿದ್ದಾರೆ .
ಭಾರತದ ಪರವಾಗಿ ಆಡುತ್ತಿರುವ ಸೂರ್ಯ ಕುಮಾರ್ ಯಾದವ್ ಅವರು ಟಿ20 ಕ್ರಿಕೆಟ್ ನಲ್ಲಿ ಅತ್ಯಂತ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವುದು ವಿಶೇಷವಾಗಿದೆ. ಅವರ ಬ್ಯಾಟಿಂಗ್ ವೈಭವ ಜಗತ್ತಿನ ಶ್ರೇಷ್ಠ ಆಟಗಾರರ ಗಮನ ಸೆಳೆದಿದೆ. ಇದೀಗ ಈ ಶ್ರೇಷ್ಠ ಬ್ಯಾಟ್ಸ್ಮನ್ ಸಾರ್ವಕಾಲಿಕ ಕ್ರಿಕೆಟಿಗರಲ್ಲಿ ಮುಂಚೂಣಿ ಸ್ಥಾನದಲ್ಲಿ ಇರುವುದು ಗಮನಿಸಬೇಕಾದ ಅಂಶವಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 + five =