ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ
ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣಸವದಿಯವರು ಇಂದು ಕೇಂದ್ರ ಪರಿಸರ ಖಾತೆ ಸಚಿವರಾದ ಪ್ರಕಾಶ್ ಜಾವಡೇಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು.
ಕೋವಿಡ್ ನ ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ ಎಂದು ಉಪಮುಖ್ಯಮಂತ್ರಿಗಳು ಪ್ರತಿಪಾದಿಸಿದರು.
ಈ ಮನವಿಗೆ ಮಾನ್ಯ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅವಧಿ ವಿಸ್ತರಣೆ ಮಾಡಿಕೊಡುವುದಾಗಿ ತಿಳಿಸಿದರು.