ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು:
ನಾಳೆಯಿಂದ (ಜೂನ್ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ.
ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಸಾರ್ವತ್ರಿಕ ವರ್ಗಾವಣೆ ನಡೆಸಬಹುದು ಎಂದು ಸರ್ಕಾರ ತಿಳಿಸಿದೆ.
ಆಯಾ ಇಲಾಖಾ ಸಚಿವರಿಗೆ ನೌಕರರ ಸಾರ್ವತ್ರಿಕ ವರ್ಗಾವಣೆ ಅಧಿಕಾರ ನೀಡಲಾಗಿದೆ. ಸರ್ಕಾರಿ ನೌಕರರ ವರ್ಗಾವಣೆ ಕುರಿತಾಗಿ ಈ ಹಿಂದೆ ಪ್ರಕಟಿಸಲಾದ ಮಾರ್ಗಸೂಚಿಯನ್ನು ಆಧರಿಸಿ ವರ್ಗಾವಣೆಗೆ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಿಳಿಸಿದೆ.
YuvaBharataha Latest Kannada News