Breaking News

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

Spread the love

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

ಯುವ ಭಾರತ ಸುದ್ದಿ ಬೆಂಗಳೂರು :
ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಜನವರಿ ೨೪ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪ್ರತಿಭಟನೆಗೆ ಕೆಎಸ್ಆರ್‌ಟಿಸಿ ಸ್ಟಾಫ್‌ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆಎಸ್‌ಆರ್‌ಟಿಸಿ ಹಾಗೂ ಎಸ್‌ಟಿ ಎಂಪ್ಲಾಯೀಸ್ ಯೂನಿಯನ್, ಕರಾರಸಾ ಸಂಸ್ಥೆ ಪ.ಜಾತಿ ಹಾಗೂ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲ ನೀಡಿವೆ.

 

ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದ್ದು, ೪ ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಸಾವಿರಾರು ನೌಕರರು ಧರಣಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ೨೦೨೧ರ ಏಪ್ರಿಲ್‌ನಲ್ಲಿ ನೌಕರರು ೧೫ ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಿಲ್ಲ. ೨೦೧೬ರಲ್ಲಿ ಶೇ ೧೨.೫ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆ ಸರ್ಕಾರ ಈಡೇರಿಸಿಲ್ಲ. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ೬ ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ ೨೦೨೦ ಮಾರ್ಚ್‌ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ಮಾಡಿಲ್ಲ. ಹೀಗಾಗಿ ಧರಣಿ ಮಾಡಲು ನಿರ್ಧರಿಸಿದ್ದೇವೆ ಎಂದು ನೌಕರರ ಸಂಘದ ಪ್ರಮುಖರು ಹೇಳಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

8 + two =