Breaking News

ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.!

Spread the love

ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.!


ಗೋಕಾಕ: ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ೨೫ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ತಿಳಿಸಿದ್ದಾರೆ.
ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ ಕತ್ತಿಯವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು, ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಅವರ ಅಗಲಿಕೆಯಿಂದ ಉತ್ತರಕರ್ನಾಟಕ ಒರ್ವ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ.
ಉಮೇಶ ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಖನ್ ಜಾರಕಿಹೊಳಿ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

two × five =