ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ
ಗೋಕಾಕ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಹೂ ಗುಚ್ಛ ನೀಡಿ ಸತ್ಕರಿಸಿದರು
ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೆ. ಆರ್. ಲಕ್ಷ್ಮೀ ನಾರಾಯಣ ಅವರು ಉಪಸ್ಥಿತರಿದ್ದರು.
ಸರ್ವೋತ್ತಮ ಜಾರಕಿಹೊಳಿ ಅವರು ಗೋಕಾಕ ಮತ್ತು ಮೂಡಲಗಿ ಘಟಕದ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷರಾಗಿ, ಗೋಕಾಕದ ಪ್ರತಿಷ್ಠಿತ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸರ್ವೋತ್ತಮ ಜಾರಕಿಹೊಳಿ ಅವರ ಆಯ್ಕೆಗೆ ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.