ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಮರಗಳನ್ನು ಬೆಳೆಸುವ ಮೂಲಕ ಅರಣ್ಯದ ಸಂರಕ್ಷಣೆ ಮಾಡಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಾ ಪರಿಸರ ರಕ್ಷಣೆಯಿಂದ ಜನರ ಆರೋಗ್ಯವಂತ ಜೀವನ ಸಾಧ್ಯವಾಗಿದ್ದು, ಎಲ್ಲರೂ ಗಿಡ ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗುವAತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಸಹಾಯಕ ಅರಣ್ಯ ಅಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ, ಉಪ ವಲಯ ಅರಣ್ಯ ಅಧಿಕಾರಿ ಎಚ್.ಎಸ್.ಇಂಗಳಗಿ, ಅರಣ್ಯ ರಕ್ಷಕ ಮಹಾದೇವ ಜಾಮುನಿ ಸೇರಿದಂತೆ ಅನೇಕರು ಇದ್ದರು.