Breaking News

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ?

Spread the love

ಬೆಳಗಾವಿವರೆಗೂ ಬರುತ್ತಾ ವಂದೇ ಭಾರತ್ ವೇಗದ ರೈಲು ?

ಯುವ ಭಾರತ ಸುದ್ದಿ ಬೆಂಗಳೂರು :            ಬೆಂಗಳೂರು ಮತ್ತು ಚೆನ್ನೈ ನಡುವೆ ಈಗಾಗಲೇ ಅತಿ ವೇಗದ ರೈಲು ಸಂಚಾರವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ಸಿಗೆ ಚಾಲನೆ ನೀಡಲಾಗಿದೆ. ಇದರ ಮುಂದಿನ ಹಂತವಾಗಿ ಉತ್ತರ ಕರ್ನಾಟಕಕ್ಕೂ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸಂಪರ್ಕ ಕಲ್ಪಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ರಾಜ್ಯದಲ್ಲಿ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಜೆಪಿ ಸರಕಾರ ಮಹತ್ವಕಾಂಕ್ಷಿ ಈ ಯೋಜನೆಯನ್ನು ಉತ್ತರ ಕರ್ನಾಟಕದ ತುತ್ತ ತುದಿ ಮಹಾನಗರವಾಗಿರುವ ಬೆಳಗಾವಿವರೆಗೂ ವಿಸ್ತರಿಸುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ.

ಬೆಂಗಳೂರು- ಹುಬ್ಬಳ್ಳಿ ನಡುವೆ ಕೆಲವೇ ತಿಂಗಳುಗಳಲ್ಲಿ ಆರಂಭವಾಗಲಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹುಬ್ಬಳ್ಳಿವರೆಗೆ ಇದ್ದ ಯೋಜನೆಯನ್ನು ಬೆಳಗಾವಿವರೆಗೂ ವಿಸ್ತರಿಸಿ ಪರಿಷ್ಕರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ್ ಮಾಹಿತಿ ನೀಡಿದ್ದು ಬೆಂಗಳೂರು-ಹುಬ್ಬಳ್ಳಿ- ಧಾರವಾಡ ನಡುವಿನ ವಂದೇ ಭಾರತ ಬೆಳಗಾವಿವರೆಗೂ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಮೊದಲು ಬೆಂಗಳೂರಿನಿಂದ ಹುಬ್ಬಳ್ಳಿವರೆಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ ಎಕ್ಸಪ್ರೆಸ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ರೈಲು ಧಾರವಾಡಕ್ಕೂ ವಿಸ್ತರಣೆಯಾಗಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.

ಹುಬ್ಬಳ್ಳಿ-ಧಾರವಾಡದವರೆಗೆ ಮಾತ್ರ ಸೀಮಿತವಾಗಿದ್ದ ಈ ರೈಲನ್ನು ಬೆಳಗಾವಿವರೆಗೂ ವಿಸ್ತರಣೆ ಮಾಡಬೇಕು ಎನ್ನುವುದು ಜಿಲ್ಲೆಯ ಜನತೆಯ ಒಕ್ಕೊರಲ ಆಗ್ರಹವಾಗಿತ್ತು.

ಇದೀಗ ಕೊನೆಗೂ ರೈಲ್ವೆ ಇಲಾಖೆ ಹಾಗೂ ಕೇಂದ್ರ ಸರಕಾರ ಇದಕ್ಕೆ ಸಹಮತ ಸೂಚಿಸಿದಂತಿದೆ. ಬೆಳಗಾವಿವರೆಗೂ ವಂದೇ ಭಾರತ್ ರೈಲು ವಿಸ್ತರಣೆಯಾದರೆ ರಾಜ್ಯದ ರಾಜಧಾನಿ ಬೆಂಗಳೂರು ಹಾಗೂ ಎರಡನೇ ರಾಜಧಾನಿಯಾಗಿರುವ ಬೆಳಗಾವಿ ನಡುವಿನ ಸಂಪರ್ಕ ಮತ್ತಷ್ಟು ಸುಲಭವಾಗಲಿದೆ. ಜತೆಗೆ ಎರಡು ನಗರಗಳನ್ನು ಸಂಧಿಸುವುದು ಮತ್ತಷ್ಟು ಸುಲಭವಾಗಲಿದೆ.

ಈ ನಡುವೆ ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಯವರೆಗೆ ಬರುವ ಅತಿ ವೇಗದ ಈ ರೈಲನ್ನು ಬೆಳಗಾವಿ ಜನತೆಗೆ ಅನುಕೂಲ ಮಾಡಿಕೊಡುವಂತೆ ಅವರು ಮನವಿ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಬೆಳೆಯುತ್ತಿರುವ ಬೆಳಗಾವಿಗೆ ಈ ರೈಲ್ವೆ ಸಂಪರ್ಕ ಒದಗಿಸಿದರೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ನೆರವಾಗುತ್ತದೆ ಎಂದು ಸಂಸದರು ಸಚಿವರಿಗೆ ಮನವರಿಕೆ ಮಾಡಿದ್ದರು. ಒಟ್ಟಾರೆ ಈ ಎಲ್ಲಾ ಅಂಶಗಳನ್ನು ಗಮನಿಸಿರುವ ಕೇಂದ್ರ ಸರಕಾರ ಕೊನೆಗೂ ಬೆಳಗಾವಿಗೆ ಅತಿ ವೇಗದ ರೈಲು ಸಂಚಾರವನ್ನು ವಿಸ್ತರಿಸುವ ಲಕ್ಷಣಗಳು ಗೋಚರವಾಗಿವೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fourteen + 8 =