Breaking News

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ

Spread the love

ವಿವಿಧ ಜಯಂತಿ ಆಚರಣೆ: ಪೂರ್ವಭಾವಿ ಸಭೆ : ಎಡಿಸಿ ಕೆ. ಟಿ ಶಾಂತಲಾ ಸೂಚನೆ

ಯುವ ಭಾರತ ಸುದ್ದಿ ಬೆಳಗಾವಿ :
ಸರ್ಕಾರದ ನಿರ್ದೇಶನದಂತೆ ಶ್ರೀ ರೇಣುಕಾಚಾರ್ಯ ಜಯಂತಿ, ಶ್ರೀ ಯೋಗಿ ನಾರಾಯಣ ಯತಿಂದ್ರರ (ಕೈವಾರ ತಾತಯ್ಯ) ಜಯಂತಿ ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿ ನಿಗದಿತ ದಿನಾಂಕದಂದು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಮೂಲಕ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ವಿವಿಧ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರೀ ರೇಣುಕಾಚಾರ್ಯ ಜಯಂತಿ ಮಾ.16 ರಂದು, ಶ್ರೀ ಯೋಗಿ ನಾರಾಯಣ ಯತಿಂದ್ರರ (ಕೈವಾರ ತಾತಯ್ಯ) ಜಯಂತಿ ಮಾ.19 ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿ ಮಾ. 26 ರಂದು ನಡೆಯಲಿವೆ.
ಜಯಂತಿಗಳ ಆಚರಣೆಗೆ ಅವಶ್ಯವಿರುವ ರೂಪರೇಷೆಗಳ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಹಾಗೂ ಕಲಾ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಈ ವೇಳೆ ಸಮಾಜದ ಮುಖಂಡರು ಮಾತನಾಡಿ, ಜಯಂತಿ ಆಚರಣೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಜನರು ಪಾಲ್ಗೊಳ್ಳತ್ತಿದ್ದಾರೆ. ಜಯಂತಿ ಆಚರಣೆಗೆ ನೀಡಿದ ಅನುದಾನ ಕಡಿಮೆ ಇದ್ದು, ಹೆಚ್ಚಿನ ಅನುದಾನ ನೀಡಬೇಕು ಎಂದು ಸಮುದಾಯದ ಮುಖಂಡರು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಈಗ ಸರ್ಕಾರದ ಆದೇಶದಂತೆ ಪ್ರತಿ ಜಯಂತಿ ಆಚರಣೆಗೆ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಸಮುದಾಯದ ಬೇಡಿಕೆಯಂತೆ ಹೆಚ್ಚು ಅನುದಾನ ಒದಗಿಸಲು ಇಲಾಖೆ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಮೆರವಣಿಗೆ ಕಾರ್ಯಕ್ರಮ:

ಕೋಟೆ ಕೆರೆಯಿಂದ ನಗರದ ಕುಮಾರ ಗಂಧರ್ವ ಕಲಾಮಂದಿರದ ವರೆಗೂ ಭಾವಚಿತ್ರ ಮೆರವಣಿಗೆ ಮಾಡಲಾಗುವುದು ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ವಿವಿಧ ಜಯಂತಿಗಳ ಆಚರಣೆಯ ಕಾರ್ಯಕ್ರಮದ ರೂಪರೇಷೆಗಳ ಸಿದ್ಧತೆ ಕುರಿತು ವಿವರಿಸಿದರು.

ವಿವಿಧ ಸಮಾಜದ ಮುಖಂಡರಾದ ರಮೇಶ ಸೊಂಟಕ್ಕಿ, ನಾರಾಯಣ ಕುಲಗೋಡ, ಬಸವರಾಜ ದಳವಿ, ವಿರೂಪಾಕ್ಷಯ್ಯ ನೀರಲಗಿಮಠ, ಚಂದ್ರಶೇಖರಯ್ಯ ಸವಚಿ, ವೆಂಕಟೇಶ ತೇಲಂಗ, ಸದಾನಂದ ತೇಲಂಗ ಹಾಗೂ ರಾಮು ನಾಯ್ಡು ಸೇರಿದಂತೆ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four × 5 =