Breaking News

ಹಿರಿಯ ನಟ ಅನಂತ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

Spread the love

ಹಿರಿಯ ನಟ ಅನಂತ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

ಯುವ ಭಾರತ ಸುದ್ದಿ ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ ನಾಗ್ ಇಂದು, ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ. ಇಂದು ಮಂಗಳವಾರ ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು​ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವರಾದ ಮುನಿರತ್ನ, ಡಾ. ಸುಧಾಕರ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈಗ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅನಂತ ನಾಗ್ ಅವರಿಗೆ ರಾಜಕೀಯ ಹೊಸದಲ್ಲ. ಅವರು ಜೆ.ಎಚ್. ಪಟೇಲ್ ನೇತೃತ್ವದ ಜನತಾದಳ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ಶಾಸಕರಾಗಿ, ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ದಿವಂಗತ ರಾಮಕೃಷ್ಣ ಹೆಗಡೆ ಅವರೊಂದಿಗೆ ಅನಂತ್ ನಾಗ್ ಅತ್ಯುತ್ತಮ ಬಾಂಧವ್ಯ ಹೊಂದಿದ್ದರು. ಜನತಾದಳ ಒಡೆದು ಹೋಳಾಗುವವರೆಗೂ ಪಕ್ಷದಲ್ಲಿದ್ದರು. 1983ರ ಅನಂತ ನಾಗ್ ಜನತಾ ಪಾರ್ಟಿಯ ಪ್ರಚಾರಕರಾಗಿದ್ದರು. 1985 ಮತ್ತು 1989ರ ಚುನಾವಣೆಯಲ್ಲಿಯೂ ಅನಂತ ನಾಗ್ ಪ್ರಚಾರ ಮಾಡಿದ್ದರು. 1989ರಲ್ಲಿ ಜನತಾದಳದಿಂದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆ ವೇಳೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿವರಾಮ ಕಾರಂತ ಸಹ ಸ್ಪರ್ಧಿಸಿದ್ದರು. ಆದರೆ ಆ ಚುನಾವಣೆಯಲ್ಲಿ ಕಾಂಗ್ರೆಸ್‌ನ ದೇವರಾಯ ನಾಯ್ಕ ವಿರುದ್ಧ ಶಿವರಾಮ ಕಾರಂತ ಮತ್ತು ಅನಂತ ನಾಗ್ ಇಬ್ಬರು ಸೋಲು ಕಂಡಿದ್ದರು.
ನಂತರ 1994ರಲ್ಲಿ ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಿಂದ ಗೆದ್ದ ಅನಂತ ನಾಗ್ ವಿಧಾನಸಭೆ ಪ್ರವೇಶಿಸಿದರು. ನಂತರ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದರು. 2004ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲನುಭವಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

4 + six =