Breaking News

ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

Spread the love

ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

ಬೆಂಗಳೂರು:
ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ.
ಸೋಮವಾರ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ( ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ ಮಿತಿ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಅನುಮೋದಿಸಿದೆ. ಅದನ್ನು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.
ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿನಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಕೆಲ ಷರತ್ತುಗಳನ್ನು ವಿಧಿಸಿ, ಜಾರಿಗೆ ತರಲು ಆದೇಶಿಸಿದ್ದಾರೆ.
ಗೃಹ ಜ್ಯೋತಿ ಯೋಜನೆಯ ಷರತ್ತುಗಳು
* ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ವಿದ್ಯುತ್ತಿಗೆ ಅನ್ವಯವಾಗುವುದಿಲ್ಲ
* ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು. ಗ್ರಾಹಕರು ನೆಟ್ ಬಿಲ್ ಅನ್ನು ಪಾವತಿಸುವುದು.
* ಅರ್ಹ ಯೂನಿಟ್ ಮೊತ್ತದ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ.

 

ಅರ್ಜಿ ಸಲ್ಲಿಕೆ ಹೇಗೆ.?
ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಪ್ರತಿ ಫಲಾನುಭವಿಯು ತನ್ನ ಕಸ್ಟಮರ್ ಐಡಿ, ಅಕೌಂಟ್ ಐಡಿಯನ್ನು ಆಧಾರ ನಂಬರಿಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.
ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗುತ್ತದೆ. ಬಾಕಿ ಬಿಲ್ 3 ತಿಂಗಳ ಒಳಗೆ ಪಾವತಿ ಕಡ್ಡಾಯ. ಇಲ್ಲದಿದ್ದರೆ ಪವರ್ ಕಟ್ ಎಂದು ತಿಳಿಸಲಾಗಿದೆ.
30-06-2023ರ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕವನ್ನು 3 ತಿಂಗಳೊಳಗೆ ಪಾವತಿಸಬೇಕು. ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದೇ ಇದ್ದರೆ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು.
ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗುತ್ತಾರೆ ಎಂದು ತಿಳಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four + seventeen =