Breaking News

ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ

Spread the love

ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ

ಯುವ ಭಾರತ ಸುದ್ದಿ ರಾಯಬಾಗ :
ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ರಾಯಬಾಗ ಮತಕ್ಷೇತ್ರದಲ್ಲಿ ಹಾಲಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಅವರ ಬಗ್ಗೆ ಯಾವುದೇ ಮನಸ್ತಾಪ ಇಲ್ಲ. ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಧುರೀಣ ರಾಜು ಕಿರಣಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು‌, ನಾನು ಬಿಜೆಪಿ ತತ್ವ ಸಿದ್ಧಾಂತ ಹಿನ್ನಲೆಯಿಂದ ಬಂದವನು. ರಾಷ್ಟ್ರೀಯ ಮನೋಭಾವ ಉಳ್ಳವನು. ಆದ ಕಾರಣ ನಾನು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳನ್ನು ಹಾಗೂ ಆ ಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿರುವ ದುರ್ಯೋಧನ ಐಹೊಳೆ ಅವರು ನಾಲ್ಕನೇ ಬಾರಿ ಶಾಸಕರಾಗುವುದರಲ್ಲಿ ಯಾವ ಸಂದೇಹವಿಲ್ಲ. ಅವರ ಗೆಲುವಿಗೆ ನಾನು ಹಾಗೂ ನಮ್ಮ ಕಾರ್ಯಕರ್ತರು ಈ ಬಾರಿಯೂ ಹಗಲಿರುಳು ಶ್ರಮಿಸುತ್ತೇವೆ. ಅವರನ್ನು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಆದ ಕಾರಣ ನಾನು ಮತ್ತು ನಮ್ಮ ಕಾರ್ಯಕರ್ತರು ಚುನಾವಣೆ ಮುಗಿಯುವವರೆಗೂ ರಾಯಬಾಗ ಮತ ಕ್ಷೇತ್ರದ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಕೋರುತ್ತವೆ. ಜೊತೆಗೆ ರಾಜ್ಯದಲ್ಲಿ ಬೊಮ್ಮಾಯಿ ಹಾಗೂ ಕೇಂದ್ರದ ನರೇಂದ್ರ ಮೋದಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ಮನವರಿಕೆ ಮಾಡಿ ಮತ ಯಾಚಿಸುವೆ ಎಂದು ಅವರು ತಿಳಿಸಿದ್ದಾರೆ.

ಇತರ ಪಕ್ಷಗಳ ನಾಯಕರು ನನ್ನನ್ನು ಭೇಟಿಯಾಗಿರುವ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಕಿಲ್ಲ. ಮನೆಗೆ ಬಂದ ಅತಿಥಿಗಳನ್ನು ಸತ್ಕರಿಸುವುದು ಬಿಜೆಪಿ ಧರ್ಮ. ಈ ಹಿನ್ನೆಲೆಯಲ್ಲಿ ನನ್ನನ್ನು ಭೇಟಿಯಾದವರಿಗೆ ನಾನು ಆತಿಥ್ಯ ನೀಡಿದ್ದೇನೆಯೇ ಹೊರತು ಚುನಾವಣೆ ಸಂದರ್ಭದಲ್ಲಿ ಇದನ್ನು ಬೇರೆ ಪಕ್ಷಗಳವರು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.

ನನಗೆ ಟಿಕೆಟ್ ಸಿಗದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಯಬಾಗ ಮತಕ್ಷೇತ್ರದಲ್ಲಿ ದುರ್ಯೋಧನ ಐಹೊಳೆ ಅವರು ಈ ಬಾರಿ ದೊಡ್ಡ ಅಂತರದಿಂದ ಗೆದ್ದು ಬರಬೇಕು. ಜೊತೆಗೆ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುವಂತಾಗಬೇಕು ಎನ್ನುವುದು ನಮ್ಮೆಲ್ಲರ ಕನಸಾಗಿದೆ. ಇದನ್ನು ನನಸು ಮಾಡುವ ನಿಟ್ಟಿನಲ್ಲಿ ನಾನು ಅಹರ್ನಿಶಿ ಶ್ರಮಿಸುತ್ತೇನೆ. ಅದರೆ ಚುನಾವಣೆ ನಡೆಯುತ್ತಿರುವ ಈ ನಿರ್ಣಾಯಕ ಸನ್ನಿವೇಶದಲ್ಲಿ ಯಾವುದೇ ಊಹಾಪೋಹ ಹರಡಿದರೂ ಜನತೆ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಅತಿ ಹೆಚ್ಚಿನ ಬಹುಮತದಿಂದ ಆಯ್ಕೆಯಾಗಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eleven − nine =